ಬೆಂಗಳೂರು: ಮಕ್ಕಳಿಗೆ ಹಾಜರಾತಿ ಕಡ್ಡಾಯವಲ್ಲ, ಶಾಲೆ ಆರಂಭವಾದರೂ ಚಂದನದಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಒಂದರಿಂದ ಒಂಬತ್ತನೇ ತರಗತಿಯ ಬಗ್ಗೆ ತಜ್ಞರ ಸಲಹೆ ಮೇರೆಗೆ ಶಾಲೆ ಆರಂಭದ ಕುರಿತು ನಿರ್ಧಾರ ಮಾಡುತ್ತೇವೆ. ಶಾಲೆ ಪ್ರಾರಂಭಿಸಿ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವುದು ನಮ್ಮ ಆಧ್ಯತೆಯಾಗಿದೆ. ಆದ್ದರಿಂದ ಇಂದಿನ ಕ್ಯಾಬಿನೆಟ್‍ನಲ್ಲಿಯೂ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ತಜ್ಞರು ಒಪ್ಪಿಗೆ ನೀಡಿದರೆ ಸೋಮವಾರದಿಂದ ಶಾಲೆ ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಕೊರೊನಾ ಮೂರನೇ ಅಲೆಯಿಂದ ಯಾವ ಮಕ್ಕಳಿಗೂ ಹೆಚ್ಚಿನ ತೊಂದರೆಯಿಲ್ಲ. ಆದರೂ ಆರೊಗ್ಯದ ವಿಚಾರದಲ್ಲಿ ಶಿಕ್ಷಣ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಿಂದ ಆರೋಗ್ಯ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಇದನ್ನೂ ಓದಿ: ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು ವಿರುದ್ಧ ಬಿಕ್ರಮ್ ಸಿಂಗ್ ಕಣಕ್ಕೆ
Advertisement
Advertisement
ಈ ವರ್ಷ ಮಕ್ಕಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಯಾವ ಮಕ್ಕಳಿಗೂ ಶಾಲೆಗೆ ಬರಲು ಬಲವಂತ ಇಲ್ಲ. ಪರೀಕ್ಷೆಗೂ 75% ಹಾಜರಾತಿ ಕಡ್ಡಾಯ ಮಾಡುವುದಿಲ್ಲ. ಎಸ್‍ಎಸ್‍ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ಪೂರ್ಣ ಪ್ರಮಾಣದ ಆಫ್‍ಲೈನ್ ತರಗತಿ ಪ್ರಾರಂಭ ಆಗೋವರೆಗೂ ಚಂದನ, ಆಕಾಶವಾಣಿಯಲ್ಲಿ ಪಠ್ಯ ಬೋಧನೆ ಮುಂದುವರೆಯುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಗುಲಾಂ ನಬಿ ಆಜಾದ್ ಪ್ರತಿಕೃತಿ ದಹಿಸಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು