ಕಾಂಗ್ರೆಸ್‍ಗೆ ಪ್ರತಿಪಕ್ಷವಾಗಿ ವರ್ತಿಸುವುದೇ ಗೊತ್ತಿಲ್ಲ: ಬಿ.ಸಿ.ನಾಗೇಶ್

Public TV
1 Min Read
BC NAGESH

ಮಡಿಕೇರಿ: ದೀರ್ಘಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‍ಗೆ ಪ್ರತಿಪಕ್ಷವಾಗಿ ಹೇಗೆ ವರ್ತಿಸಬೇಕು ಎನ್ನುವುದೇ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕಿಡಿಕಾರಿದರು.

ಕೊಡಗಿನಲ್ಲಿ ಮಳೆ ಆರ್ಭಟ ಹೆಚ್ಚಾಗಿ ಅವಾಂತರಗಳು ಸೃಷ್ಟಿಯಾಗಿದ್ದರೂ, ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಅವರು ಆರೋಪ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು ಎಂದರು.

Congress

10 ದಿನಗಳ ಹಿಂದೆಯಷ್ಟೆ ಬಂದು ಮಳೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿದ್ದೆ. ಅಷ್ಟೇ ಅಲ್ಲದೇ ಕಂದಾಯ ಸಚಿವ ಆರ್.ಅಶೋಕ್ ಸಹ ಇತ್ತೀಚೆಗಷ್ಟೆ ಬಂದು ಪರಿಶೀಲನೆ ನಡೆಸಿದ್ದರು. ಸರ್ಕಾರ ಕೊಡಗನ್ನು ಮರೆತಿದೆ ಎನ್ನುವ ಕಾಂಗ್ರೆಸ್ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಯಿಂದ ಜಿಲ್ಲಾ ಪಂಚಾಯಿತಿವರೆಗೆ ಕಾರ್ಯಪಡೆ ರಚಿಸಲಾಗಿದೆ. 2018ರ ದುರಂತದ ಮಾದರಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಲಾಗಿದೆ ಎಂದರು. ಇದನ್ನೂ ಓದಿ: ಉದಯಪುರ ಹತ್ಯೆ ಬಗ್ಗೆ ಪೋಸ್ಟ್ – ಬಾಲಕಿಗೆ ಕೊಲೆ, ಅತ್ಯಾಚಾರ ಬೆದರಿಕೆ ಹಾಕಿದ ಜಮ್ಮು, ಕಾಶ್ಮೀರದ ವ್ಯಕ್ತಿ

earthquake madikeri 2

ಚೆಕ್ ಡ್ಯಾಂನಲ್ಲಿ ಮರಗಳು ಸಿಲುಕಿ ಮನೆಗಳಿಗೆ ನೀರು ನುಗ್ಗಿದೆ. ಕೂಡಲೇ ಮರಗಳನ್ನು ತೆರವುಗೊಳಿಸಲಾಗಿದೆ. 55 ಮನೆಗಳು ಭಾಗಶಃ, 2 ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. 3 ಸೇತುವೆ, 1 ಶಾಲೆ, 1 ದೇಗುಲಕ್ಕೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಸಂಸದರ ಬೇಡಿಕೆಗೆ ಮಣಿದ್ರಾ ಉದ್ಧವ್?

bc nagesh 2

2018ರ ಕೆಲವು ಸಂತ್ರಸ್ತರಿಗೆ ಇನ್ನೂ ಮನೆ ಕೊಟ್ಟಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಇನ್ಫೋಸಿಸ್ ಮನೆಗಳು ಪೂರ್ಣಗೊಂಡಿಲ್ಲ. ಕೆಲವು ಮನೆಗಳಿಗೆ ವಿದ್ಯುತ್ ಸಂಪರ್ಕ ಆಗಬೇಕಿದೆ ಎಂದ ಅವರು, ಕೆಲವರಲ್ಲಿ ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು ಎನ್ನುವ ಉದ್ದೇಶ ಹೊಂದಿದ್ದಾರೆ. ಕೆಲಸ ಆಗಲಿಲ್ಲ ಎಂದಾಗ ಕೈಗೆಟುಕದ ದ್ರಾಕ್ಷಿ ಹುಳಿ ಎನ್ನುತ್ತಾರೆ. ಹಾಗಾಗಿ ಕೆಲವರು ನನ್ನ ವಿರುದ್ಧ ಪ್ರಧಾನಿಗೆ ಪತ್ರ ಬರೆದಿರಬಹುದು ಎಂದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *