ಬೆಂಗಳೂರು: ಕೇಂದ್ರ ಬಜೆಟ್‍ನಲ್ಲಿ ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡಿದ್ದು, ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿ ಕೇಂದ್ರ ಸಕಾರವನ್ನು ಶ್ಲಾಘಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಒಂದು ತರಗತಿ, ಒಂದು ಟಿವಿ ಚಾನಲ್ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆಯಲ್ಲಿ ಕಲಿಸಲು ಚಾನಲ್‍ಗಳ ಸಂಖ್ಯೆಯನ್ನು 200ಕ್ಕೆ ಹೆಚ್ಚಿಸುವ ಪ್ರಧಾನಿ ನರೇದ್ರ ಮೋದಿ ಸರ್ಕಾರದ ಘೋಷಣೆ ಶ್ಲಾಘನೀಯ. ಇದು ಶಿಕ್ಷಣದ ಪ್ರಸರಣಕ್ಕೆ ಇನ್ನಷ್ಟು ನೆರವಾಗಲಿದೆ ಎಂದು ಪೋಸ್ಟ್ ಮಾಡಿದ್ದಾರೆ.
Advertisement
‘ಒಂದು ತರಗತಿ, ಒಂದು ಟಿವಿ ಚಾನಲ್’ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆಯಲ್ಲಿ ಕಲಿಸಲು ಚಾನಲ್ ಗಳ ಸಂಖ್ಯೆಯನ್ನು 200 ಕ್ಕೆ ಹೆಚ್ಚಿಸುವ ಮಾನ್ಯ ಪ್ರಧಾನಿ ಶ್ರೀ @narendramodi ಸರ್ಕಾರದ ಘೋಷಣೆ ಶ್ಲಾಘನೀಯ. ಇದು ಶಿಕ್ಷಣದ ಪ್ರಸರಣಕ್ಕೆ ಇನ್ನಷ್ಟು ನೆರವಾಗಲಿದೆ.#AatmaNirbharBharatKaBudget @BSBommai @nsitharaman @nalinkateel https://t.co/ZnKyvEcTFJ
— B.C Nagesh (@BCNagesh_bjp) February 1, 2022
Advertisement
ಕೇಂದ್ರ ಸರ್ಕಾರ ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ನಿರ್ಧಾರವಾಗಿದ್ದು, ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲು ಈ ಯೋಜನೆ ತರಲಾಗಿದೆ. ಇದನ್ನೂ ಓದಿ: ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ
Advertisement
Advertisement
ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಈ ಯೋಜನೆಯಲ್ಲಿ ಕೈಜೋಡಿಸಲಿದೆ ಎಂದು ಅವರು ಮಾಹಿತಿ ನೀಡಿದರು. ಜೊತೆಗೆ ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ ಪಠ್ಯ ಬೋಧಿಸಲು 200 ಪ್ರಾದೇಶಿಕ ಟಿವಿ ಚಾನೆಲ್‍ಗಳನ್ನು ತೆರೆಯಲಾಗುತ್ತದೆ ಎಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Budget 2022: ವರ್ಲ್ಡ್ ಕ್ಲಾಸ್ ಶಿಕ್ಷಣಕ್ಕೆ ಡಿಜಿಟಲ್ ವಿಶ್ವವಿದ್ಯಾಲಯ ಸ್ಥಾಪನೆ