ಕಾರವಾರ: ಮದರಸಾಗಳನ್ನು ಶಿಕ್ಷಣ ಪದ್ಧತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಉತ್ತರಕನ್ನಡ ಜಿಲ್ಲೆಯಲ್ಲಿ ಹೇಳಿದರು.
ಕುಮಟಾ ತಾಲೂಕಿನ ಗೋಕರ್ಣದ ವಿಷ್ಣುಪೀಠ ವಿದ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮದರಸಾ ಶಿಕ್ಷಣದಿಂದಾಗಿ ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು. ಅವರು ಸಹ ನಮ್ಮ ಎಲ್ಲಾ ಮಕ್ಕಳಂತೆ ಈ ಶಿಕ್ಷಣ ಪದ್ಧತಿಗೆ ಬರಬೇಕು ಎನ್ನುವ ಕಾರಣದಿಂದ ಮುಂದಿನ ದಿನದಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ ಎಂದು ತಿಳಿಸಿದರು.
Advertisement
Advertisement
ಈ ಬಗ್ಗೆ ಅಲ್ಪಸಂಖ್ಯಾತ ನಾಯಕರ ಗಮನಕ್ಕೂ ಬಂದಿದೆ. ಮದರಸಾಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟು ಅವಕಾಶ ಮಾಡಿಕೊಟ್ಟಿದ್ದೇವೆ. ಆ ಪ್ರಕಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು: ಹೆಚ್‍ಡಿಕೆ
Advertisement
ಹಿಜಬ್ ತೀರ್ಪಿನಿಂದ ಶಾಲಾ ಕಾಲೇಜಿಗೆ ಬಾರದೇ ಇರುವವರ ಕುರಿತು ಮಾತನಾಡಿದ ಅವರು, ಶಾಲೆಗೆ ಬರಲೇಬೇಕು ಎಂದು ಒತ್ತಾಯಿಸಿ ಅವರ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಶೇ.99.9ರಷ್ಟು ಆ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಒಂದು ಪರಸೆಂಟ್ ಮಾತ್ರ ಬರುತ್ತಿಲ್ಲ. ಅವರನ್ನು ಶಾಲೆಗೆ ಕರೆಸುವಂತಹ ಪ್ರಯತ್ನ ಮಾಡುತ್ತೇವೆ. ಆದರೆ ಎಳೆದುಕೊಂಡು ಬರುವ ಪ್ರಯತ್ನ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
Advertisement
ಎನ್‍ಇಪಿ ಬಗ್ಗೆ ಪಾಲಕರಲ್ಲಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗೊಂದಲ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. 20 ಸಾವಿರ ಶಾಲೆಯಲ್ಲಿ ಮಾತ್ರ ಪ್ರಾರಂಭ ಮಾಡುತ್ತಿದ್ದೇವೆ. ಮಿಕ್ಕ ಶಾಲೆಯಲ್ಲಿ ಈಗ ಹೇಗೆ ನಡೆಯುತ್ತದೆಯೋ ಹಾಗೆಯೇ ನಡಿಯುತ್ತದೆ. ಸಂಖ್ಯೆ ಮತ್ತು ಸಾಕ್ಷರತೆಗೆ ಹೆಚ್ಚು ಒತ್ತನ್ನು ಕೊಡುತ್ತಿದ್ದೇವೆ. ನಮ್ಮಲ್ಲಿ 48 ಸಾವಿರ ಶಾಲೆಗಳಿದ್ದರೂ ಮಕ್ಕಳ ಸಂಖ್ಯೆ ಕಡಿಮೆ ಇದೆ. ಎಲ್ಲಿ ಮಕ್ಕಳು ಹೆಚ್ಚು ಇರುತ್ತಾರೋ ಅಲ್ಲಿ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಬಿಜೆಪಿ ಮಾದರಿಯಲ್ಲೇ ನಾವು ಮುಂದಿನ ಚುನಾವಣೆ ಎದುರಿಸುತ್ತೇವೆ. ಬಸವರಾಜ್ ಹೊರಟ್ಟಿಯವರು ಬಿಜೆಪಿ ವೈಚಾರಿಕ ಸಂಘಟನೆ ವಿಚಾರ ಒಪ್ಪಿಕೊಂಡು ಬಂದರೆ ಸ್ವಾಗತಿಸುತ್ತೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮುಸ್ಲಿಮರ ಮತಗಳು ಬೇಕಿದೆ – ನಾವು ಮೈತ್ರಿಗೆ ಸಿದ್ಧ ಎಂದ ಜಲೀಲ್
ಭಗವದ್ಗೀತೆ ಪಠ್ಯ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಕೊರತೆ ಇದೆ. ಇದು ಎಲ್ಲರಿಗೂ ಅರಿವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ ನೈತಿಕ ಶಿಕ್ಷಣದ ತರಗತಿಯನ್ನು ಮಾಡುತ್ತೇವೆ. ನೈತಿಕ ಶಿಕ್ಷಣದಲ್ಲಿ ಏನೇನು ಇರಬೇಕು ಎಂದು ಶಿಕ್ಷಣ ತಜ್ಞರ ಸಲಹೆ ಪಡೆದು ಮಾಡುತ್ತೇವೆ. ಭಗವದ್ಗೀತೆ ಧಾರ್ಮಿಕ ಅಲ್ಲ ಎಂದು ಪ್ರತಿಕ್ರಿಯಿಸಿದರು.