ಮೈಸೂರು: ಸಿದ್ದರಾಮಯ್ಯ ಅವರು ಸಿಎಂ ಆದ್ರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟರು.
ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್‍ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ. ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನವಾಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.
Advertisement
Advertisement
ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ಮಾರುತ್ತಿದ್ದೇವೆ. ಕೃತಕ ಅಭಾವ ಸೃಷ್ಟಿಸಿದರೆ ಅಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ. ಕಾಳಸಂತೆಕೋರರ ಪತ್ತೆಗೆ ಸ್ಕ್ವಾಡ್ ರಚಿಸಲಾಗಿದೆ. ಮಳೆಹಾನಿ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ
Advertisement
Advertisement
ವರದಿಗಳನ್ನು ಮೊದಲು ಪರಿಶೀಲಿಸುತ್ತೇವೆ. ನಂತರ ಅದರ ಆಧಾರದ ಮೇಲೆ ಪರಿಹಾರ ನೀಡಲಾಗುತ್ತೆ. ಮಳೆಹಾನಿಯಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು.