ಹಾವೇರಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವು, ಬೇಸರ ಆಗಿದೆ. ಜಾತಿವಾರು, ಪ್ರಾಂತ್ಯಾವಾರು ವಿಚಾರದಲ್ಲಿ ಹಾವೇರಿ ಜಿಲ್ಲೆ ಲೆಕ್ಕಕ್ಕೆ ಇಲ್ಲದಂತಾಗಿದೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾನು ಏಕೈಕ ಕಾಂಗ್ರೆಸ್ ಶಾಸಕನಾಗಿದ್ದೇನೆ. ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ನಾನೊಬ್ಬನೆ ಲಿಂಗಾಯತ ಶಾಸಕ. ಈ ಬಾರಿ ಸಚಿವ ಸ್ಥಾನ ಸಿಗೋ ಭರವಸೆ ಇತ್ತು. ಪ್ರಥಮ ಬಾರಿ ಸಾದರ ಲಿಂಗಾಯತರನ್ನು ಹೊರಗಿಟ್ಟು ಸಚಿವ ಸಂಪುಟ ಆಗಿರೋದು. ಹಾವೇರಿ ಜಿಲ್ಲೆಗೆ ಹೇಳೋರು ಕೇಳೋರು ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪ್ಪನಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬಿ.ಸಿ ಪಾಟೀಲ್ ಮಗಳು ಗರಂ..!
Advertisement
Advertisement
ಬಹುತೇಕ ಎಲ್ಲ ಸರ್ಕಾರಗಳು ಇದ್ದಾಗ ಸಾದರ ಲಿಂಗಾಯತರಿಗೆ ಸ್ಥಾನ ಸಿಕ್ಕಿತ್ತು. ಕಾಂಗ್ರೆಸ್ ವಿರೋಧಿ ಅಲೆ ಇದ್ದಾಗಲೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ನಾನು ಸಿದ್ದರಾಮಯ್ಯರನ್ನ ನಂಬಿದ್ದೆ. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯನವರ ಜೊತೆಗಿದ್ದೆ. ಅವರೇ ನಮ್ಮ ಗಾಡ್ ಫಾದರ್. ನಾನು ಅವರನ್ನೇ ನಂಬಿದ್ದೆ, ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ನನಗೆ ಮಂತ್ರಿ ಸ್ಥಾನ ಸಿಗುತ್ತಿತ್ತು. ಹಾವೇರಿ ಜಿಲ್ಲೆ ಏನು ತಪ್ಪು ಮಾಡಿದೆ. ಜಿಲ್ಲೆಯ ಜನರು ಯಾವ ರೀತಿ ಪಕ್ಷವನ್ನು ನಂಬಬೇಕು ಅಂತ ಗೊತ್ತಾಗ್ತಿಲ್ಲ. ಸಚಿವ ಸ್ಥಾನ ಸಿಕ್ಕಿಲ್ಲ ಎಂದಾಗ ಯಾರೂ ನನ್ನ ಪರವಾಗಿಲ್ಲ ಎಂದು ನೊಂದುಕೊಂಡಿದ್ದಾರೆ.
Advertisement
Advertisement
ಮುಂದಿನ ನಡೆ ಏನು ಅಂತ ಕಾದು ನೋಡಿ, ದಿಢೀರ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ನಾನು ಎಲ್ಲೂ ಹೋಗಲ್ಲ, ಲೋಕಸಭಾ ಚುನಾವಣೆಯ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ನಾನು ಪಕ್ಷದ ಪರ ನಿಲ್ಲಲೇಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಪುತ್ರಿ ಸೃಷ್ಠಿ ಪಾಟೀಲ್ ಅವರು ತಂದೆಗೆ ಸಚಿವ ಸ್ಥಾಸ ಸಿಗಲಿಲ್ಲ ಅಂತ ಹೈಕಮಾಂಡ್ ವಿರುದ್ಧ ಕಿಡಿಕಾರಿ ಅಸಮಾಧಾನ ಹೊರಹಾಕಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv