Advertisements

ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ: ಬಿಸಿ ಪಾಟೀಲ್

ಮೈಸೂರು: ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ. ಆದರೆ ಇದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.

Advertisements

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 25 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದ ಅವರು, ಅರಗ ಜ್ಞಾನೇಂದ್ರ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.

Advertisements

ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ನಿಜಕ್ಕೂ ದುರಂತ ವಿಚಾರವಾಗಿದೆ. ಪೊಲೀಸ್ ಆಗಲು ಪ್ರತಿಭೆ ಪ್ರಾಮಾಣಿಕತೆ ದಕ್ಷತೆ ಬೇಕು. ಹಣದಿಂದ ಬಂದವರು ಪ್ರಾಮಾಣಿಕವಾಗಿ ಕೆಲಸ ಮಾಡಲು ಆಗಿತ್ತಾ, ಇದರಿಂದ ಜನ ಸಾಮಾನ್ಯರಿಗೆ ಹೇಗೆ ನ್ಯಾಯ ಸಿಗುತ್ತದೆ ಎಂದು ಪ್ರಶ್ನಿಸಿದ ಅವರು, ನಾನು ಪೊಲೀಸ್ ಪರೀಕ್ಷೆ ಬರೆದಾಗ ಈ ರೀತಿ ಇರಲಿಲ್ಲ. ಯಾರು ಶಾಮೀಲಾಗಿದ್ದಾರೆ ಅವರ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಮುಖ ಆರೋಪಿ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರ್

ರಾಜ್ಯದಲ್ಲಿ ಧರ್ಮ ದಂಗಲ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಶಾಂತಿ ಕೆಟ್ಟಿಲ್ಲ ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ.  ಹುಬ್ಬಳ್ಳಿ ಪ್ರಕರಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಫ್ಐಆರ್ ಮಾಡಲಾಗಿತ್ತು. ಆದರೂ ಸಾವಿರಾರು ಜನರು ಗುಂಡಾವರ್ತನೆ ತೋರಿದ್ದಾರೆ. ಆರೋಪಿಗಳು ಯುವಕನ ಶಿರಚ್ಛೇದ ಮಾಡುತ್ತೇವೆ ಎನ್ನುತ್ತಾರೆ. ಯುವಕನನ್ನು ವಶಕ್ಕೆ ಕೊಡಿ ತಲೆ ಕಲಿಯುತ್ತೇವೆ ಎನ್ನುತ್ತಾರೆ. ಇದು ಭಾರತನಾ ತಾಲಿಬಾನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಹಿಜಬ್‌ ಹೋರಾಟಗಾರ್ತಿಯರು

Advertisements

ಕಾಂಗ್ರೆಸ್ ಕಾನೂನು ಕೈಗೆತ್ತುಕೊಂಡವರ ರಕ್ಷಣೆ ಮಾಡುತ್ತಿದೆ. ಕಾಂಗ್ರೆಸ್ಸಿಗರು ದೇಶದ ಪರ ಇದ್ದಾರಾ ಅಥವಾ ದೇಶದ ವಿರುದ್ಧ ಇದ್ದವರಾ. ಕಾನೂನು ಪರನಾ ಕಾನೂನು ವಿರೋಧನಾ ಎಂದು ಕಾಂಗ್ರೆಸ್‍ನವರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

Advertisements
Exit mobile version