ಬೆಂಗಳೂರು: ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿ ಚೆಕ್ ಮಾಡಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
Advertisement
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಂಪಣ್ಣ ಅವರನ್ನು ಮೊದಲು ಮೆಂಟಲ್ ಆಸ್ಪತ್ರೆ ಸೇರಿಸಿ ಚೆಕ್ ಮಾಡಿಸಬೇಕು. ಯಾವುದೇ ದಾಖಲೆ ಇಲ್ಲದೆ ಆರೋಪ ಮಾಡೋದು ಸರಿಯಲ್ಲ. ಇದು ಕಾಂಗ್ರೆಸ್ ಪ್ರಾಯೋಜಿತ ಆರೋಪ. ಇದನ್ನು ಹೇಳೋಕೆ ಯಾವುದೇ ಹಿಂಜರಿಕೆ ಇಲ್ಲ. ಇದನ್ನು ಕಾಂಗ್ರೆಸ್ ಮಾಡಿಸಿದೆ. ಯಾವುದೇ ದಾಖಲೆ ಇಲ್ಲದೆ ಮಾತಾಡಿದ್ರೆ ಹೇಗೆ. ಮೊದಲು ಅವ್ರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿ ಚೆಕ್ ಮಾಡಿಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ
Advertisement
Advertisement
ಯಾವ ಮಂತ್ರಿ ಮೇಲೆ ಆರೋಪ ಮಾಡಿದ್ದಾರೋ ಅ ಮಂತ್ರಿಗಳು ಕೆಂಪಣ್ಣ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿ. ನ್ಯಾಯಾಂಗ ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ನಿರ್ಧಾರ ಮಾಡ್ತಾರೆ. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಎಡವಟ್ಟು ಬೆನ್ನಲ್ಲೇ ಟ್ರಸ್ಟ್, ಪ್ರತಿಷ್ಠಾನ ಅಧ್ಯಕ್ಷರು ಸದಸ್ಯರ ನೇಮಕಾತಿ ಆದೇಶ ವಾಪಸ್