ಮುಂಬೈ: ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ.
ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಸ್ನಲ್ಲಿ ಭಾರತ ಗೆಲುವು ಸಾಧಿಸಿದ ಬಳಿಕ ಇಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.
🚨 NEWS 🚨
BCCI Announces Cash Prize for India’s victorious ICC Champions Trophy 2025 contingent.
Details 🔽 #TeamIndia | #ChampionsTrophy https://t.co/si5V9RFFgX
— BCCI (@BCCI) March 20, 2025
ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು.ಇದನ್ನೂ ಓದಿ: ಬಿಕಿನಿ ಧರಿಸಿ ಹಾಟ್ ಅವತಾರ ತಾಳಿದ ‘ಬಿಗ್ ಬಾಸ್’ ಖ್ಯಾತಿಯ ಇಶಾನಿ
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಮೊದಲ ಪಂದ್ಯದಲ್ಲೇ ಬಾಂಗ್ಲಾದೇಶ ವಿರುದ್ಧ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದ್ದ ಭಾರತ ಬಳಿಕ ಪಾಕಿಸ್ತಾನ ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿತ್ತು. ನ್ಯೂಜಿಲೆಂಡ್ ವಿರುದ್ಧ 44 ರನ್‌ಗಳ ಜಯ ಪಡೆದಿತ್ತು.
ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಮಾರ್ಚ್ 9 ರಂದು ನಡೆದ ಫೈನಲ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.
ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತಕ್ಕೆ ಐಸಿಸಿ 20 ಕೋಟಿ ರೂ. ನೀಡಿದರೆ, ರನ್ನರ್ ಅಪ್ ನ್ಯೂಜಿಲೆಂಡ್‌ಗೆ 1.12 ಮಿಲಿಯನ್ ಡಾಲರ್ (9.72 ಕೋಟಿ ರೂ.) ನಗದು ಬಹುಮಾನ ನೀಡಿದೆ.ಇದನ್ನೂ ಓದಿ: ಮತ್ತೆ ದರ ಏರಿಕೆ ಶಾಕ್ – ಎಸ್ಕಾಂ ಪಿಂಚಣಿ ಹಣ ಹೊಂದಿಸಲು ಜನರ ಜೇಬಿಗೆ ಕತ್ತರಿ