ನವದೆಹಲಿ: ಈ ಬಾರಿಯ ಐಪಿಎಲ್ ಸೀಸನ್ ಸೇರಿದಂತೆ 2026 ಹಾಗೂ 2027ರ ಸೀಸನ್‌ಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ.
ಇಂದು (ನ.22) ಭಾರತೀಯ ಕ್ರಿಕೆಟ್ ಮಂಡಳಿಯು (Board of Control for Cricket in India) 2025ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (Indian Premier League) ವೇಳಾಪಟ್ಟಿ ಪ್ರಕಟಿಸಿದ್ದು, ಜೊತೆಗೆ 2026 ಹಾಗೂ 2027ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸಾಮಾನ್ಯವಾಗಿ ಬಿಸಿಸಿಐ ಪಂದ್ಯಗಳು ಸಮೀಪಿಸುತ್ತಿದ್ದಂತೆ ವೇಳಾಪಟ್ಟಿಯನ್ನು ಪ್ರಕಟಿಸುತ್ತದೆ. ಆದರೆ ಈ ಬಾರಿ ಮೂರು ಸೀಸನ್‌ಗಳ ವೇಳಾಪಟ್ಟಿಯನ್ನು ಒಟ್ಟಿಗೆ ಬಿಡುಗಡೆ ಮಾಡುವ ಮೂಲಕ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಸಚಿವರೊಬ್ಬರ ತಲೆದಂಡಕ್ಕೆ ಸಿದ್ಧತೆ!
2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಂದು ಪ್ರಾರಂಭವಾಗಿ ಮೇ 25ರವರೆಗೆ ನಡೆಯಲಿದೆ. ಇನ್ನೂ ಈ ಬಾರಿಯ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಇದೇ ತಿಂಗಳ 24 ಹಾಗೂ 25 ರಂದು ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯಲಿದೆ.
ಬಿಸಿಸಿಐ ಪ್ರಕಟಿಸಿದ ವೇಳಾಪಟ್ಟಿಯಂತೆ 2026ರ ಟೂರ್ನಿಯು ಮಾರ್ಚ್ 15 ರಂದು ಪ್ರಾರಂಭವಾಗಿ ಮೇ 31 ರವರೆಗೆ ನಡೆಯಲಿದೆ ಹಾಗೂ 2027ರ ಟೂರ್ನಿಯು ಮಾರ್ಚ್ 14 ರಂದು ಪ್ರಾರಂಭವಾಗಿ ಮೇ 30 ರವರೆಗೆ ನಡೆಯಲಿದೆ ಎಂದು ತಿಳಿಸಿದೆ.
ವೇಳಾಪಟ್ಟಿ ಪ್ರಕಟಣೆಯಿಂದಾಗಿ ಫ್ರ್ಯಾಂಚೈಸಿಗಳು ಹಾಗೂ ಆಟಗಾರರು ಹರಾಜು ಪ್ರಕ್ರಿಯೆಗಾಗಿ ಯೋಜನೆಯನ್ನು ಹಾಕಿಕೊಳ್ಳಲು ಸಹಕಾರಿಯಾಗುತ್ತದೆ. ಮುಂದಿನ ಮೂರು ಐಪಿಎಲ್ ಸೀಸನ್‌ಗಳಿಗೆ ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಲಭ್ಯತೆಯನ್ನು ಬಿಸಿಸಿಐ ದೃಢಪಡಿಸಿದೆ.ಇದನ್ನೂ ಓದಿ: ಭಾರತದ ಒತ್ತಡಕ್ಕೆ ಮಣಿದ ಕೆನಡಾ – ಮೋದಿ ಹೆಸರನ್ನು ಉಲ್ಲೇಖಿಸಿ ಮಾಧ್ಯಮ ವರದಿಯನ್ನು ತಿರಸ್ಕರಿಸಿದ ಸರ್ಕಾರ