ಢಾಕಾ: ಏಷ್ಯಾ ಕಪ್ (Asia Cup) ಆಯೋಜಿಸಲು ಬಿಸಿಸಿಐ (BCCI) ಒಪ್ಪಿಗೆ ನೀಡಿದ್ದು ಸೆಪ್ಟೆಂಬರ್‌ನಲ್ಲಿ ದುಬೈ ಮತ್ತು ಅಬುಧಾಬಿಯಲ್ಲಿ ಪಂದ್ಯ ನಡೆಸುವ ಪ್ರಸ್ತಾಪ ಇರಿಸಿದೆ ಎಂದು ವರದಿಯಾಗಿದೆ.
ಗುರುವಾರ ಢಾಕಾದಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಾರ್ಷಿಕ ಸಭೆಯಲ್ಲಿ (ಎಜಿಎಂ) ಏಷ್ಯಾ ಕಪ್ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಭಾರತೀಯ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ವರ್ಚುವಲ್ ಆಗಿ ಭಾಗವಹಿಸಿದ್ದರು. ಸದ್ಯಕ್ಕೆ ಪಂದ್ಯಕ್ಕಾಗಿ ದುಬೈ ಮತ್ತು ಅಬುಧಾಬಿಯನ್ನು ಆಯ್ಕೆ ಮಾಡಿದ್ದು, ಒಂದೇ ಸ್ಥಳದಲ್ಲಿ ಪಂದ್ಯ ಆಯೋಜಿಸುವಂತೆ ಇಚ್ಛೆ ವ್ಯಕ್ತಪಡಿಸಿದೆ.ಇದನ್ನೂ ಓದಿ: 15 ವರ್ಷದಿಂದ ನಡೆಯುತ್ತಿದೆ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ- ತಲೆ ಕೆಡಿಸಿಕೊಳ್ಳದ ಜನಪ್ರತಿನಿಧಿಗಳು
ಮೂಲಗಳ ಪ್ರಕರ ಒಂದೇ ವಿಭಾಗದಲ್ಲಿ ಭಾರತ ಮತ್ತು ಪಾಕ್ ಬರುವ ಸಾಧ್ಯತೆಯಿದೆ. ಬಿಸಿಸಿಐ ಮೂರು ಸ್ಥಳಗಳಲ್ಲಿ ಪಂದ್ಯ ನಡೆಸುವ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಏಷ್ಯಾ ಕಪ್‌ಗಾಗಿ ಕೇವಲ ಎರಡು ಸ್ಥಳಗಳನ್ನು ಮಾತ್ರ ಬಳಸಿಕೊಳ್ಳುವ ನಿರೀಕ್ಷೆಯಿದೆ. ಸದ್ಯದಲ್ಲೇ ಕ್ರಿಕೆಟ್ ವೇಳಾಪಟ್ಟಿ ಫೈನಲ್ ಆಗುವ ಸಾಧ್ಯತೆಗಳಿದ್ದು, ಬಿಸಿಸಿಐ ಧನದಾಹಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇಶಕ್ಕಿಂತ ಹಣವೇ ಮುಖ್ಯವಾಯ್ತಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.
ಪಹಲ್ಗಾಮ್ ದಾಳಿಯ ಬಳಿಕ ಭಾರತ ಏಷ್ಯಾ ಕಪ್‌ನಲ್ಲಿ ಭಾಗವಹಿಸುವುದಿಲ್ಲ ಹಾಗೂ ಆತಿಥ್ಯ ವಹಿಸುವುದಿಲ್ಲ ಎಂದು ಮೇ ತಿಂಗಳಲ್ಲಿ ಮೂಲಗಳು ತಿಳಿಸಿದ್ದವು.ಇದನ್ನೂ ಓದಿ: DCC Bank Election| ಲಿಂಗಾಯತ ನಾಯಕರ ಸಭೆಗೆ ಜಾರಕಿಹೊಳಿ ಬ್ರದರ್ಸ್ ಚೆಕ್‌ಮೇಟ್!