ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್ ಆಟಗಾರ ಹಿಟ್‌ಮ್ಯಾನ್ ರೋಹಿತ್ ಶರ್ಮಾ (Rohit Sharma). ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋಹಿತ್ ಶರ್ಮಾ. ಅವರಿಗೆ ತಮ್ಮ ಕ್ರೆಕೆಟ್ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ. ಅಲ್ಲದೇ ಕ್ರಿಕೆಟ್ ಲೋಕದ ಕಿಂಗ್ ಆಗಿ ಮೆರೆದಾಡಿದ ವಿರಾಟ್ ಕೊಹ್ಲಿ (Virat kohli) ಕೂಡ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ಕ್ರಿಕೆಟ್ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ.
ರೋಹಿತ್ ಶರ್ಮಾ ಅವರು ಈ ಮಟ್ಟಕ್ಕೆ ಬೆಳೆಯಲು ಕಠಿಣಶ್ರಮವೇ ಕಾರಣ. ಯಶಸ್ಸಿಗೆ ಮತ್ತೇನಾದ್ರೂ ಸೂತ್ರ ಇದೆಯಾ ಅಂತ ರೋಹಿತ್ ಅವರನ್ನೊಮ್ಮೆ ಕೇಳಿ ನೋಡಿದ್ರೆ ಅವರು ಕೊಡುವ ಆನ್ಸರ್, `ಹಾರ್ಡ್ ವರ್ಕ್.. ಹಾರ್ಡ್ ವರ್ಕ್.. ಓನ್ಲಿ ಹಾರ್ಡ್ ವರ್ಕ್’. ಬಾಲ್ಯದಿಂದಲೇ ರೋಹಿತ್‌ಗೆ ಕ್ರಿಕೆಟ್ (Cricket) ಅಂದರೆ ಪ್ರಾಣ. ಮುಂಬೈಗೆ ಬಂದ ಮೇಲೆ ಗಲ್ಲಿಗಲ್ಲಿಗಳಲ್ಲಿ ಕ್ರಿಕೆಟ್ ಆಡಿಕೊಂಡಿದ್ದರು. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹಿಟ್‌ಮ್ಯಾನ್ 2007ರ ಹೊತ್ತಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡರು. 2007ರ ಜೂನ್ 23ರಂದು ಐರ್ಲೆಂಡ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಪದಾರ್ಪಣೆ ಮಾಡಿದರು. ಇದೀಗ ತಮ್ಮ 18 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಆಸೀಸ್ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್ ಕ್ಯಾಪ್ಟನ್; ರೋಹಿತ್, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?
ರೋಹಿತ್ ಸಾಧನೆ
ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 11 ಪಂದ್ಯಗಳ ಪೈಕಿ 10ರಲ್ಲಿ ಭಾರತ ವಿಜಯ ಸಾಧಿಸಿತ್ತು. ಈ ವೇಳೆ ರೋಹಿತ್ ಕ್ಯಾಪ್ಟನ್ ಆಗಿದ್ದರು. ಅಲ್ಲದೇ 2024ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್, 2025ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟರು. ಸದ್ಯ ಟಿ20, ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್, ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಯುವ ಆಟಾರ ಶುಭಮನ್ ಗಿಲ್ ಅವರಿಗೆ ನಾಯಕನ ಪಟ್ಟ ಕಟ್ಟಲಾಗಿದೆ. ಆದರೆ ರೋಹಿತ್ ಶರ್ಮಾ ಅವರಿಂದ ನಾಯಕತ್ವ ಕಸಿದುಕೊಂಡಿರುವ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅವರ ಅಭಿಮಾನಿಗಳು ಕೆರಳಿದ್ದಾರೆ. ಈ ಮಧ್ಯೆ ಮಾಜಿ ಇಂಗ್ಲೆಂಡ್ ಆಟಗಾರ ಡೇವಿಡ್ ಗೋವರ್ ಅವರು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು 2027ರ ಏಕದಿನ ವಿಶ್ವಕಪ್ ಹೊತ್ತಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಡೇವಿಡ್ ಗೋವರ್ ಹೇಳಿದ್ದೇನು?
ರೋ-ಕೊ (ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ) ಖ್ಯಾತಿಯ ಇಬ್ಬರು ಅನುಭವಿ ಆಟಗಾರರು 2027ರ ವಿಶ್ವಕಪ್ ಆಡುವುದಿಲ್ಲ. ಇದೇ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ
ಅಜಿತ್ ಅಗರ್ಕರ್ ಸಮರ್ಥನೆ
ಇನ್ನೂ ಏಕದಿನ ಕ್ರಿಕೆಟ್ ಕ್ಯಾಪ್ಟನ್ ಆಗಿ ಶುಭಮನ್ ಗಿಲ್ ಅಯ್ಕೆಯನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸಮರ್ಥಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027ರ ವಿಶ್ವಕಪ್ ಆಡುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಆಸೀಸ್ ಸರಣಿ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಒಂದು ಯುಗ ಅಂತ್ಯವಾಗಲಿದೆ ಎನ್ನೋದು ಕೋಟ್ಯಂತರ ಅಭಿಮಾನಿಗಳ ಬೇಸರ. ಇದನ್ನೂ ಓದಿ: ವಿಂಡೀಸ್ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ