ಮುಂಬೈ: ರಿಷಭ್ ಪಂತ್ (Rishabh Pant) ಹಣೆಗೆ ಎರಡು ಸ್ಟಿಚ್ ಹಾಕಲಾಗಿದೆ. ಅವರ ಬಲ ಮೊಣಕಾಲಿನ ಬಳಿ ಹರಿದ ಗಾಯಗಳಾಗಿದ್ದು, ಮೂಳೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಲ ಮಣಿಕಟ್ಟು, ಪಾದ, ಪಾದದ ಬೆರಳಿಗೆ ಗಾಯವಾಗಿದೆ. ಬೆನ್ನಿನಲ್ಲೂ ಉಚ್ಚಿದಂತಿರುವ ಸುಟ್ಟಗಾಯದಂತಿದ್ದು, ರಿಷಭ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಭಯಪಡುವ ಅಗತ್ಯವಿಲ್ಲ ಎಂದು ಭಾರತೀಯ ನಿಯಂತ್ರಣ ಮಂಡಳಿ (BCCI) ಪಂತ್ ಆರೋಗ್ಯದ ಕುರಿತು ಮಾಧ್ಯಮ ವರದಿ ಬಿಡುಗಡೆಗೊಳಿಸಿದೆ.
Advertisement
ಉತ್ತರಾಖಂಡದಿಂದ (Uttarakhand) ದೆಹಲಿಗೆ ಪಂತ್ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‍ಪುರ ಝಾಲ್‍ನ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಹೊಡೆದುಕೊಂಡು ಹೊರ ಬಂದು ಗ್ರೇಟ್ ಎಸ್ಕೇಪ್ ಆಗಿದ್ದರು. ಕೂಡಲೇ ಪಂತ್‍ರನ್ನು ಸ್ಥಳೀಯರು ಆಸ್ಪತ್ರೆ ದಾಖಲಿಸಿದ್ದರು. ಇದನ್ನೂ ಓದಿ: ರಕ್ತದ ಮಡುವಿನಲ್ಲಿ ಕಾರಿನ ಗಾಜು ಹೊಡೆದು ಹೊರಬಂದ ಪಂತ್ – ಕಾರಿನಲ್ಲಿದ್ದ ಹಣ ದೋಚಿದ ಕಳ್ಳರು
Advertisement
Advertisement
ಬಿಸಿಸಿಐ ಮಾಧ್ಯಮ ವರದಿ:
ಉತ್ತರಾಖಂಡದ ರೂರ್ಕಿ ಬಳಿ ಶುಕ್ರವಾರ ಮುಂಜಾನೆ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಕಾರು ಅಪಘಾತಕ್ಕೀಡಾಗಿತ್ತು. ಪರಿಣಾಮ ಗಾಯಗೊಂಡ ಪಂತ್ ಅವರನ್ನು ಸಕ್ಷಮ್ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಮತ್ತು ಥರ್ಮಾ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
Advertisement
Media Statement – Rishabh Pant
The BCCI will see to it that Rishabh receives the best possible medical care and gets all the support he needs to come out of this traumatic phase.
Details here ????????https://t.co/NFv6QbdwBD
— BCCI (@BCCI) December 30, 2022
ರಿಷಭ್ ಅವರ ಹಣೆಗೆ ಎರಡು ಸ್ಟಿಚ್ ಹಾಕಲಾಗಿದೆ. ಅವರ ಬಲ ಮೊಣಕಾಲಿನ ಬಳಿ ಹರಿದ ಗಾಯಗಳಾಗಿದೆ. ಬಲ ಮಣಿಕಟ್ಟು, ಪಾದ, ಪಾದದ ಬೆರಳಿಗೆ ಗಾಯವಾಗಿದೆ. ಬೆನ್ನಿಗೂ ಉಚ್ಚಿದಂತಿರುವ ಸುಟ್ಟಗಾಯದಂತಿದೆ. ರಿಷಭ್‍ನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಈಗ ಡೆಹ್ರಾಡೂನ್‍ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವೈದ್ಯರ ತಂಡ ಮುಂದಿನ ಚಿಕಿತ್ಸೆಗಾಗಿ MRI ಸ್ಕ್ಯಾನ್‍ಗೆ ಒಳಪಡಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ತಾಯಿಗೆ ಸರ್ಪ್ರೈಸ್ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ
Rishabh Pant Car Accident: देहरादून के Max Hospital में भर्ती कराए गए ऋषभ पंत, विंड स्क्रीन तोड़कर बचाई जानhttps://t.co/gdBoW93XBT#rishabhpantaccident #rishabhpantcaraccident #rishabhpant #cricketerrishabhpantaccident #cricketerrishabhpantcaraccident pic.twitter.com/UtV7ZrejMH
— Shubham Yadav (@Shubham83610285) December 30, 2022
ಬಿಸಿಸಿಐ, ರಿಷಭ್ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ವೈದ್ಯಕೀಯ ತಂಡವು ಪ್ರಸ್ತುತ ರಿಷಭ್‍ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಕ್ಷಣ, ಕ್ಷಣದ ಮಾಹಿತಿ ಪಡೆಯುತ್ತಿದ್ದೇವೆ. ರಿಷಭ್‍ಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಆರೈಕೆಯನ್ನು ನೀಡಲು ಸಹಕರಿಸುತ್ತೇವೆ. ಈ ಆಘಾತದಿಂದ ಹೊರಬರಲು ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತೇವೆ ಎಂದು ತಿಳಿಸಿದೆ.