ಮುಂಬೈ: ಟೀಂ ಇಂಡಿಯಾ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ಬಿಸಿಸಿಐ ಶೋಕಾಸ್ ನೋಟಿಸ್ ನೀಡಿದ್ದು, ಕೆರಿಬಿಯನ್ ಲೀಗ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮಾಲೀಕತ್ವದ ತಂಡದೊಂದಿಗೆ ಕಾಣಿಸಿಕೊಂಡ ಬಗ್ಗೆ ವಿವರಣೆಯನ್ನು ಕೋರಿದೆ.
ಬಿಸಿಸಿಐ ಸಂಸ್ಥೆಯೊಂದಿಗೆ ದಿನೇಶ್ ಕಾರ್ತಿಕ್ ಅವರು ಮಾಡಿಕೊಂಡಿರುವ ಒಪ್ಪಂದ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಮೇಲೆ ನೋಟಿಸ್ ನೀಡಲಾಗಿದೆ. ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್)ನ ಆರಂಭಿಕ ಪಂದ್ಯದಲ್ಲಿ ಸೇಂಟ್ ಕಿಟ್ಸ್ ಮತ್ತು ನೆವಿಸ್ ನಡುವಿನ ಪಂದ್ಯದ ಸಂದರ್ಭದಲ್ಲಿ ಕಾರ್ತಿಕ್ ಡ್ರೆಸ್ಸಿಂಗ್ ರೂಮಿನಲ್ಲಿ ಕಾಣಿಸಿಕೊಂಡಿದ್ರು.
Advertisement
ಬಿಸಿಸಿಐ ನಿಯಮಗಳ ಅನ್ವಯ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವ ಆಟಗಾರರು ಅನುಮತಿ ಇಲ್ಲದೆ ಬೇರೆ ಯಾವುದೇ ಕ್ರೀಡಾ ಸಂಸ್ಥೆಯ ಟೂರ್ನಿಗಳಲ್ಲಿ ಕಾಣಿಸಿಕೊಳ್ಳಲು ಅವಕಾಶವಿಲ್ಲ. ಆದರೆ ದಿನೇಶ್ ಕಾರ್ತಿಕ್ ಅವರು ಈ ನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಅವರು, 1 ವಾರದಲ್ಲಿ ವಿವರಣೆ ನೀಡುವಂತೆ ನೋಟಿಸಿನಲ್ಲಿ ತಿಳಿಸಿದೆ.
Advertisement
ಇಂಡಿಯನ್ ಪ್ರೀಮಿಯರ್ ಲೀಗ್‍ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಿಪಿಎಲ್ ಟೂರ್ನಿಯ ಟ್ರಿನ್ ಬಾಗೊ ತಂಡದ ಮಾಲೀಕತ್ವವನ್ನು ಹೊಂದಿದೆ. ಈ ತಂಡದ ಜೆರ್ಸಿಯನ್ನು ತೊಟ್ಟು ಕಾರ್ತಿಕ್ ಕಾಣಿಸಿಕೊಂಡಿದ್ದರು. ಕೋಲ್ಕತ್ತಾ ತಂಡದ ನಾಯಕತ್ವವನ್ನು ದಿನೇಶ್ ಕಾರ್ತಿಕ್ ಐಪಿಎಲ್‍ನಲ್ಲಿ ವಹಿಸಿಕೊಂಡಿದ್ದರು.
Advertisement
Advertisement
34 ವರ್ಷದ ದಿನೇಶ್ ಕಾರ್ತಿಕ್ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆದಿದ್ದರು. ಆ ಬಳಿಕ ವಿಂಡೀಸ್ ಟೂರ್ನಿಗೆ ಅವರನ್ನು ಕೈಬಿಡಲಾಗಿತ್ತು. ಸದ್ಯ ತಂಡದಿಂದ ಹೊರಗುಳಿದಿರುವ ದಿನೇಶ್ ಅವರಿಗೆ ಈ ನೋಟಿಸಿನಿಂದ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.