ಮುಂಬೈ: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಐಪಿಎಲ್ (IPL 2024) ಪ್ರೇಮಿಗಳಿಗೆ ಭಾರೀ ಆಘಾತವಾಗಿದೆ. ಐಪಿಎಲ್‌ನ ದ್ವಿತೀಯಾರ್ಧವನ್ನು ದುಬೈಗೆ (ಯುನೈಟೆಡ್ ಅರಬ್ ಎಮಿರೇಟ್ಸ್ – UAE) ಸ್ಥಳಾಂತರಿಸಲಾಗುತ್ತದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕಾರಿ ಮೂಲಗಳು ತಿಳಿಸಿವೆ.
ಏಪ್ರಿಲ್ 19 ರಿಂದ ಆರಂಭಗೊಂಡು ಜೂನ್ 4ರ ವರೆಗೆ ಚುನಾವಣಾ (Lok Sabha Elections) ಪ್ರಕ್ರಿಯೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ ದ್ವಿತೀಯಾರ್ಧದ ಪಂದ್ಯಗಳನ್ನು ದುಬೈನಲ್ಲಿ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪೆರ್ರಿ ಆಲ್‌ರೌಂಡರ್ ಆಟ – ಮುಂಬೈ ವಿರುದ್ಧ ಜಯ, ಪ್ಲೇ ಆಫ್‌ಗೆ ಆರ್‌ಸಿಬಿ
Advertisement
Advertisement
ದುಬೈನಲ್ಲಿ ಆಯೋಜನೆ ಇದೇ ಮೊದಲೇನಲ್ಲ:
ಯುಎಇನಲ್ಲಿ ಐಪಿಎಲ್ ಆಯೋಜನೆ ಮಾಡುತ್ತಿರುವುದು ಇದೇ ಮೊದಲೇನಲ್ಲ. 2014, 2019ರ ಲೋಕಸಭಾ ಚುನಾವಣೆ ವೇಳೆಯೂ ಐಪಿಎಲ್‌ನ ದ್ವಿತೀಯಾರ್ಧ ಭಾಗತವನ್ನು ಯುಎಇನಲ್ಲಿ ನಡೆಸಲಾಗಿತ್ತು. ಈ ಬಾರಿ ಆಯೋಜಿಸುತ್ತಿರುವುದು ಸೇರಿದರೆ 3ನೇ ಬಾರಿ ದುಬೈನಲ್ಲಿ ಐಪಿಎಲ್ ಆಯೋಜಿಸಿದಂತಾಗುತ್ತದೆ. ಸದ್ಯ ಈ ಬಗ್ಗೆ ಬಿಸಿಸಿಐ ಅಥವಾ ಐಪಿಎಲ್ ಸಮಿತಿ ಅಧಿಕೃತವಾಗಿ ಯಾವುದೇ ಮಾಹಿತಿ ಹಂಚಿಕೊಳ್ಳದಿದ್ದರೂ, ಸ್ಥಳಾಂತರಿವುದು ಖಚಿತವಾಗಿವೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಹಾಲಿ ಚಾಂಪಿಯನ್ಸ್ ಮುಂಬೈ ಮನೆಗೆ – ಆರ್‌ಸಿಬಿ ಮೊದಲಬಾರಿ ಫೈನಲ್‌ಗೆ
Advertisement
Advertisement
ಐಪಿಎಲ್ ಆರಂಭ ಯಾವಾಗ?
ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 22 ರಿಂದ ಆರಂಭವಾಗಲಿದೆ. ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆ ಮೊದಲ 15 ದಿನಗಳು ಕಾಲ ನಡೆಯುವ 21 ಪಂದ್ಯಗಳ ವೇಳಾಪಟ್ಟಿ ಸದ್ಯಕ್ಕೆ ಪ್ರಕಟಿಸಲಾಗಿದೆ. ಮಾ. 22ರಿಂದ ಏಪ್ರಿಲ್ 7ರ ತನಕ 21 ಪಂದ್ಯಗಳು ನಡೆಯಲಿದ್ದು, ಈ ಪೈಕಿ 4 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯವು ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಉಳಿದ ಪಂದ್ಯಗಳು ಸಂಜೆ 7.30ಕ್ಕೆ ಪ್ರಾರಂಭವಾಗಲಿವೆ. ಡಬಲ್ ಹೆಡ್ಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಇದನ್ನೂ ಓದಿ: ಕೊಹ್ಲಿ ಜೊತೆಗೆ ಬಾಬರ್, ಧೋನಿ ಜೊತೆಗೆ ರಿಜ್ವಾನ್, ಬುಮ್ರಾ ಜೊತೆಗೆ ಶಾಹೀನ್ ಶಾ ಅಫ್ರಿದಿ?
ಯಾರ ನಡುವೆ, ಯಾವ ದಿನ, ಎಲ್ಲಿ ಪಂದ್ಯ?
1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಮಾರ್ಚ್ 22 ಚೆನ್ನೈ,
2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ,
3. ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ
4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ
5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್
6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು
7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26, ಚೆನ್ನೈ
8. ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್
9. ಆರ್‌ಆರ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ
10. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಮಾರ್ಚ್ 29 ಬೆಂಗಳೂರು
11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ
12. ಗುಜರಾತ್ ಟೈಟಾನ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್
13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ
14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ
15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2, ಬೆಂಗಳೂರು
16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ
17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4, ಅಹಮದಾಬಾದ್
18. ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5, ಹೈದರಾಬಾದ್
19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6, ಜೈಪುರ
20. ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7, ಮುಂಬೈ
21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7, ಲಕ್ನೋ