CricketLatestLeading NewsMain PostSports

2023ರ ಏಕದಿನ AisaCup ಟೂರ್ನಿಗೆ ಪಾಕಿಸ್ತಾನಕ್ಕೆ ಲಗ್ಗೆ ಇಡಲಿದೆ ಭಾರತ

- ಕೇಂದ್ರ ಸರ್ಕಾರದ ತೀರ್ಮಾನದ ಬಳಿಕ ಅಂತಿಮ ನಿರ್ಧಾರ ಎಂದ BCCI

ಮುಂಬೈ: 2023ಕ್ಕೆ ಪಾಕಿಸ್ತಾನ ಆಯೋಜಿಸುವ ಏಷ್ಯಾಕಪ್ ಏಕದಿನ ಕ್ರಿಕೆಟ್ (ODI AisaCup Cricket) ಟೂರ್ನಿಗೆ ಭಾರತ ತಂಡವನ್ನು (Team India) ಪಾಕಿಸ್ತಾನಕ್ಕೆ (Pakistana) ಕಳುಹಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಕ್ತವಾಗಿದೆ.

ಹೌದು. ಭಾರತ ತಂಡವು 2006ರಲ್ಲಿ ರಾಹುಲ್ ದ್ರಾವಿಡ್ (Rahul Dravid) ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ನಂತರ ರಾಜತಾಂತ್ರಿಕ ಕಾರಣಗಳಿಂದಾಗಿ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ.

ಇದೀಗ 2023ರಲ್ಲಿ ಪಾಕಿಸ್ತಾನವು ತನ್ನ ದೇಶದಲ್ಲಿ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿ ಆಯೋಜಿಸಲು ನಿರ್ಧರಿಸಿದೆ. ಆ ನಂತರ ಭಾರತದಲ್ಲಿ ಐಸಿಸಿ (ICC) ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ನಡುವೆ ಪಾಕಿಸ್ತಾನಕ್ಕೆ ಟೀಂ ಇಂಡಿಯಾವನ್ನು (Team India) ಕಳುಹಿಸಲು ಮುಕ್ತವಾಗಿದೆ ಎನ್ನುವ ನಿರ್ಧಾರ ಪ್ರಕಟಿಸಿದೆ.

ಕೇಂದ್ರ ಸರ್ಕಾರ (Central Government Of India) ಒಪ್ಪಿಗೆ ಸೂಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದೇ ತಿಂಗಳ ಅಕ್ಟೋಬರ್ 18ರಂದು ಬಿಸಿಸಿಐ ತನ್ನ ವಾರ್ಷಿಕ ಸಾಮಾನ್ಯ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ ಎಂದು ಬಿಸಿಸಿಐ ಹೇಳಿದೆ. ಇದನ್ನೂ ಓದಿ: ಶಿಫಾಲಿ, ದೀಪ್ತಿ ಆಟಕ್ಕೆ ಥಾಯ್ಲೆಂಡ್‌ ಥಂಡಾ – ಏಷ್ಯಾಕಪ್ ಫೈನಲ್‍ಗೆ ಭಾರತ

ಇತ್ತೀಚೆಗೆ ನಡೆದ ಟಿ20 (T20) ಏಷ್ಯಾಕಪ್ ಟೂರ್ನಿಯಲ್ಲಿ ಮೊದಲ ಪಂದ್ಯದಲ್ಲೇ ಬದ್ಧವೈರಿ ಪಾಕಿಸ್ತಾನವನ್ನು ಮಣಿಸಿದ ಟೀಂ ಇಂಡಿಯಾ ಲೀಗ್ ಫೋರ್ ಹಂತದಲ್ಲಿ ಸೋಲನ್ನು ಅನುಭವಿಸಿ ಟೂರ್ನಿಯಿಂದ ಹೊರ ಬಿದ್ದಿತ್ತು.

Live Tv

Leave a Reply

Your email address will not be published. Required fields are marked *

Back to top button