CoronaCricketLatestMain PostSports

ಸೌರವ್ ಗಂಗೂಲಿಗೆ ಕೊರೊನಾ ಪಾಸಿಟಿವ್

ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ನಿನ್ನೆ ಸಂಜೆ ಕೊರೊನಾ ಸೋಂಕು ದೃಢಪಟ್ಟಿದ್ದು, ವುಡ್‌ಲ್ಯಾಂಡ್ಸ್ ನರ್ಸಿಂಗ್ ಹೋಮ್‌ಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ವೃತ್ತಿಪರ ಕೆಲಸದ ನಿಮಿತ್ತ ಗಂಗೂಲಿ ಹಲವೆಡೆ ಪ್ರವಾಸ ಕೈಗೊಂಡಿದ್ದರು. ಮುಂಜಾಗ್ರತೆ ಕ್ರಮವಾಗಿ ಆಸ್ಪತ್ರೆಯಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ. ಇದನ್ನೂ ಓದಿ: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಭಾರತದ ದಿಗ್ಗಜ ಆಟಗಾರರ ಪಟ್ಟಿಗೆ ರಾಹುಲ್ ಸೇರ್ಪಡೆ

ಗಂಗೂಲಿ ಅವರು ಅನಾರೋಗ್ಯದಿಂದಾಗಿ ಈ ವರ್ಷದಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜನವರಿಯಲ್ಲಿ ಗಂಗೂಲಿ ಅವರು ಎದೆನೋವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಒಮ್ಮೆ ಹೃದಯಾಘಾತ ಕೂಡ ಆಗಿ ಚಿಕಿತ್ಸೆ ಪಡೆದುಕೊಂಡಿದ್ದರು.

ನಿನ್ನೆ ರಾತ್ರಿ ಅವರನ್ನು ವುಡ್‌ಲ್ಯಾಂಡ್ಸ್ ನರ್ಸಿಂಗ್ ಹೋಮ್‌ಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಔಷಧೋಪಚಾರ ನೀಡಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

Leave a Reply

Your email address will not be published.

Back to top button