ವಿಶಾಖಪಟ್ಟಣಂ: ಸತತ ಎರಡು ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನಾಯಕ ರಿಷಭ್ ಪಂತ್‌ಗೆ ಬಿಸಿಸಿಐ (BCCI) 24 ಲಕ್ಷ ರೂ. ದಂಡ ವಿಧಿಸಿದೆ.
ರಿಷಭ್ ಪಂತ್ (Rishabh Pant) ಅವರಿಗೆ 24 ಲಕ್ಷ ರೂ. ದಂಡ ವಿಧಿಸಿದರೆ ತಂಡದ ಇಂಪ್ಯಾಕ್ಟ್ ಆಟಗಾರ ಅಭಿಷೇಕ್ ಸೇರಿದಂತೆ ಉಳಿದ ಆಟಗಾರರಿಗೆ 6 ಲಕ್ಷ ರೂ. ದಂಡ ವಿಧಿಸಲಾಗಿದೆ.
Advertisement
ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ನಿಧಾನಗತಿಯ ಬೌಲಿಂಗ್ ಮಾಡಿದ್ದರೆ, ಮಾರ್ಚ್ 21 ರಂದು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ವಿರುದ್ದದ ಪಂದ್ಯದಲ್ಲಿ ಡೆಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿತ್ತು.
Advertisement
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಕೋಲ್ಕತ್ತಾ 7 ವಿಕೆಟ್ ನಷ್ಟಕ್ಕೆ ಬರೋಬ್ಬರಿ 272 ರನ್ ಹೊಡೆದಿತ್ತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ 17.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್ ಆಯ್ತು. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ
Advertisement
Advertisement
24 ಲಕ್ಷ ಯಾಕೆ?
ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಎರಡನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ.
ಐಪಿಎಲ್ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ.
ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್ ಟೈಮ್ ಔಟ್ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ತಂಡ 6-9 ಓವರ್ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. ಎರಡನೇ ಸ್ಟ್ರಟೆಜಿಕ್ ಟೈಮ್ ಔಟ್ ಅನ್ನು ಬ್ಯಾಟಿಂಗ್ ತಂಡ 13-16 ಓವರ್ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. ಇದನ್ನೂ ಓದಿ: ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆ – ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆ?
ದಂಡ ಯಾಕೆ?
ಐಪಿಎಲ್ ಅಂದ್ರೆ ಬಿಸಿನೆಸ್. ಇಲ್ಲಿ ಹಣದ ಹೊಳೆಯೇ ಹರಿಯುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿ ಸೆಕೆಂಡ್ ಬಹಳ ಮುಖ್ಯ.
ಮಳೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಪಂದ್ಯಕ್ಕೆ ಅಡ್ಡಿಯಾದರೆ ಅದು ಬೇರೆ ವಿಷಯ. ಆದರೆ ಒಂದು ತಂಡ ನಿಧಾನಗತಿ ಬೌಲಿಂಗ್ ಮಾಡಿದರೆ ಅದು ಐಪಿಎಲ್ ದಿನದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ವೆಚ್ಚಗಳು ಜಾಸ್ತಿಯಾಗುತ್ತದೆ.
ಐಪಿಎಲ್‌ಗೆ ಹೆಚ್ಚಿನ ಆದಾಯ ಬರುತ್ತಿರುವುದು ಟಿವಿ ರೈಟ್ಸ್‌ನಿಂದ. ಟಿವಿಯಲ್ಲಿ ಪ್ರತಿ ಸೆಕೆಂಡ್ ಬಹಳ ಮುಖ್ಯ. ಅದರಲ್ಲೂ 2 ಪಂದ್ಯ ಒಂದೇ ದಿನ ನಿಗದಿಯಾದರೆ ಎರಡನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ಯಾಕೆಂದರೆ ಜಾಹೀರಾತುಗಳು ಮೊದಲೇ ಬುಕ್ ಆಗಿರುತ್ತದೆ.
ಏನೇ ಮಾಡಿದರೂ ಶಿಸ್ತು ಇರಬೇಕು. ಹೀಗಾಗಿ ಯಾರಿಗೂ ಸಮಸ್ಯೆ ಆಗದೇ ಇರಲು ಮತ್ತು ಎಲ್ಲ ಸರಿಯಾದ ಸಮಯಕ್ಕೆ ಮುಕ್ತಾಯವಾಗಲು ಪಂದ್ಯ ಮುಗಿಯಲು ಸಮಯವನ್ನು ನಿಗದಿ ಮಾಡಲಾಗಿದೆ. ಹೆಚ್ಚು ಸಮಯ ತೆಗೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಈ ಕಾರಣಕ್ಕೆ ಶಿಸ್ತುಬದ್ಧವಾಗಿ ನಡೆದುಕೊಂಡ ತಂಡಕ್ಕೆ ಫೇರ್ ಪ್ಲೇ ಅಂಕಗಳನ್ನು ನೀಡಲಾಗುತ್ತದೆ. ಇಬ್ಬರು ಫೀಲ್ಡ್ ಅಂಪೈರ್ ಮತ್ತು ಮೂರನೇ ಅಂಪೈರ್ ಈ ಅಂಕವನ್ನು ತಂಡಗಳಿಗೆ ನೀಡುತ್ತಾರೆ.