ನವದೆಹಲಿ: ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದರೊಂದಿಗೆ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಆರೋಗ್ಯದ ಬಗ್ಗೆಯೂ ಬಿಸಿಸಿಐ (BCCI) ಅಪ್ಡೇಟ್ ಬಿಡುಗಡೆ ಮಾಡಿದೆ.
ಶಮಿ ಫೆ.26 ರಂದು ಲಂಡನ್‍ನಲ್ಲಿ ತಮ್ಮ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ 2024ರ ಟಿ20 ವಿಶ್ವಕಪ್‍ಗೆ ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸುತ್ತಿದೆ. ಅವರ ಆರೋಗ್ಯ ಸುಧಾರಿಸಿದ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ. ಇದನ್ನೂ ಓದಿ: ಕಿರಣ್ ನವಗಿರೆ ಸ್ಫೋಟಕ ಅರ್ಧಶತಕ – ಬಲಿಷ್ಠ ಮುಂಬೈ ವಿರುದ್ಧ ಯಪಿಗೆ 7 ವಿಕೆಟ್‌ಗಳ ಜಯ
Advertisement
ಶಮಿ ಮುಂಬರುವ ಐಪಿಎಲ್‍ನಿಂದ ಹೊರಗುಳಿಯಲ್ಲಿದ್ದಾರೆ. ಐಪಿಎಲ್‍ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡುತ್ತಿರುವ ಶಮಿ, ಲೀಗ್‍ನಿಂದ ಹೊರಬಿದ್ದಿರುವುದು ಗುಜರಾತ್ ಟೈಟಾನ್ಸ್ ತಂಡಕ್ಕೆ ಆಘಾತ ಉಂಟು ಮಾಡಿದೆ. 2022ರಲ್ಲಿ ಮೊಹಮ್ಮದ್ ಶಮಿಯನ್ನು 6.25 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ಖರೀದಿಸಿತ್ತು.
Advertisement
Advertisement
ತಂಡದ ಪರ 2022 ಮತ್ತು 2023 ಆವೃತ್ತಿಯಲ್ಲಿ 33 ಪಂದ್ಯಗಳನ್ನು ಆಡಿರುವ ಶಮಿ ಇದರಲ್ಲಿ 48 ವಿಕೆಟ್ ಪಡೆದಿದ್ದಾರೆ. 2023ರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಅವರಾಗಿದ್ದಾರೆ. ಈ ಆವೃತ್ತಿಯಲ್ಲಿ ಆಡಿದ್ದ 17 ಪಂದ್ಯಗಳಲ್ಲಿ 28 ವಿಕೆಟ್‍ಗಳನ್ನು ಕಬಳಿಸಿದ್ದು, ಇದೀಗ ಅವರು ಸಂಪೂರ್ಣ ಐಪಿಎಲ್‍ನಿಂದ ಹೊರಗುಳಿದಿದ್ದಾರೆ.
Advertisement
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್‍ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್. ಇದನ್ನೂ ಓದಿ: BCCI ವಾರ್ಷಿಕ ಆಟಗಾರರ ರಿಟೈನರ್‌ಶಿಪ್ ಪಟ್ಟಿ ರಿಲೀಸ್ – ಯಶಸ್ವಿ, ರಿಂಕು ಪಡೆಯೋ ಸಂಬಳ ಎಷ್ಟು ಗೊತ್ತಾ?