ಮುಂಬೈ: ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಕೆಎಲ್ ರಾಹುಲ್ (KL Rahul) ಟೆಸ್ಟ್ ಉಪನಾಯಕನ (Vice-Captain) ಪಟ್ಟದಿಂದ ಔಟ್ ಆಗಿದ್ದಾರೆ.
ಟೆಸ್ಟ್ ಸರಣಿಗೂ ಮುನ್ನವೇ ರಾಹುಲ್ ಪ್ರದರ್ಶನ ಕಳಪೆಯಾಗಿತ್ತು. ಈ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಇಂದು ಮುಕ್ತಾಯಗೊಂಡ ಎರಡನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್ 1 ರನ್ ಗಳಿಸಿ ಔಟಾಗಿದ್ದರು.
Advertisement
ರಾಹುಲ್ ಕಳಪೆ ಪ್ರದರ್ಶನದ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ ವ್ಯಕ್ತಪಡಿಸಿದ್ದರು. ಟೀಕೆಗಳು ಜೋರಾಗುತ್ತಿದ್ದಂತೆ ಬಿಸಿಸಿಐ (BCCI) ರಾಹುಲ್ ಅವರನ್ನು ಟೆಸ್ಟ್ (Test Cricket) ಉಪನಾಯಕನ ಸ್ಥಾನದಿಂದ ಕೈ ಬಿಟ್ಟಿದೆ. ಆಸ್ಟ್ರೇಲಿಯಾ (Australia) ವಿರುದ್ಧ ನಡೆಯಲಿರುವ ಮುಂದಿನ ಎರಡು ಟೆಸ್ಟ್ ಮತ್ತು ಮೂರು ಏಕದಿನದ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದೆ. ಎರಡು ಮಾದರಿಯ ಕ್ರಿಕೆಟಿಗೆ ರೋಹಿತ್ ಶರ್ಮಾ (Rohith Sharma) ನಾಯಕನಾಗಿದ್ದರೆ ಏಕದಿನಕ್ಕೆ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಮುಂದುವರಿಯಲಿದ್ದಾರೆ.
Advertisement
Advertisement
ಮಾರ್ಚ್ 17 ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕಾರಣ ರೋಹಿತ್ ಶರ್ಮಾ ಅಲಭ್ಯರಾಗಲಿದ್ದು, ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಜಡೇಜಾ ಜಾದು – ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಜಯ
Advertisement
ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕತ್.
ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k