ಮುಂಬೈ: ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಅವರು ಈ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ20 ವಿಶ್ವಕಪ್‍ನಿಂದ (World Cup) ಹೊರಬಿದ್ದಿದ್ದಾರೆ.
ಟಿ20 ವಿಶ್ವಕಪ್ ಪ್ರಾರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ (India) ಭಾರೀ ಆಘಾತವಾಗಿದೆ. ಈ ಬಗ್ಗೆ ಬಿಸಿಸಿಐ ಟ್ವೀಟ್ ಮಾಡಿದ್ದು, ಟೀಂ ಇಂಡಿಯಾದ ಬಲಗೈ ವೇಗದ ಬೌಲರ್ ಬುಮ್ರಾ ಬೆನ್ನುಮೂಳೆಯ ಮುರಿತದಿಂದಾಗಿ ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ಅವರ ಗಾಯದ ಸಮಸ್ಯೆ ಗಂಭೀರವಾಗಿದ್ದು, ಕನಿಷ್ಠ ಆರು ತಿಂಗಳುಗಳ ವಿಶ್ರಾಂತಿ ಬೇಕಾಗಿದೆ ಎಂದು ತಿಳಿಸಿದೆ.
Advertisement
???? UPDATE ????
Jasprit Bumrah complained of back pain during India’s practice session on Tuesday. The BCCI Medical Team assessed him. He is ruled out of the first #INDvSA T20I.#TeamIndia
— BCCI (@BCCI) September 28, 2022
Advertisement
ಇತ್ತೀಚೆಗಷ್ಟೇ ಗಾಯದಿಂದ ಚೇತರಿಕೆ ಕಂಡು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮೂಲಕ ಕಂಬ್ಯಾಕ್ ಮಾಡಿದ್ದರು. ಆ ಬಳಿಕ ಇದೀಗ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಅಲಭ್ಯರಾಗಲಿದ್ದಾರೆ. ಇದನ್ನೂ ಓದಿ: T20ಯಲ್ಲಿ 11 ದೇಶಗಳ ವಿರುದ್ಧ ಅರ್ಧಶತಕದಾಟ – ವಿಶೇಷ ದಾಖಲೆ ಬರೆದ ಕನ್ನಡಿಗ
Advertisement
Advertisement
ಇತ್ತೀಚೆಗಷ್ಟೇ ಗಾಯದ ಸಮಸ್ಯೆಯಿಂದಾಗಿ ಆಲ್‍ರೌಂಡರ್ ರವೀಂದ್ರ ಜಡೇಜಾ ಟಿ20 ಪಂದ್ಯದಿಂದ ಹಿಂದೆ ಸರಿದಿದ್ದರು. ಇದೀಗ ಬುಮ್ರಾ ಹೊರಗುಳಿದಿರುವುದರಿಂದ ಅವರ ಸ್ಥಾನಕ್ಕೆ ಯಾರು ಆಯ್ಕೆ ಆಗುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಆಫ್ರಿಕಾಗೆ ಆಘಾತ ನೀಡಿದ ಅರ್ಶ್‌ದೀಪ್, ಚಹಾರ್, ಶೈನ್ ಆದ ಸೂರ್ಯ, ರಾಹುಲ್- ಭಾರತಕ್ಕೆ 8 ವಿಕೆಟ್‌ಗಳ ಜಯ