ಮುಂಬೈ/ಅಬುಧಾಬಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿಯೂ ಆಗಿರುವ ಅಮಿತ್ ಶಾ ಅವರ ಪುತ್ರ ಜಯ್ ಶಾ (Jay Shah) ಅವರು ತಮ್ಮ ಈ ಹುದ್ದೆ ತೊರೆಯಲಿದ್ದಾರೆ ಎಂಬ ಸುದ್ದಿ ಕೆಲವೇ ದಿನಗಳಲ್ಲಿ ನಿಜವಾಗುವ ಸಾಧ್ಯತೆ ಕಂಡು ಬಂದಿದೆ. ಏಕೆಂದರೆ ಐಸಿಸಿ ಹಾಲಿ ಅಧ್ಯಕ್ಷರಾಗಿರುವ ಗ್ರೆಗ್ ಬಾರ್ಕ್ಲೇ (Greg Barclay) 3ನೇ ಅವಧಿಗೆ ಮುಂದುವರಿಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಬೆನ್ನಲ್ಲೇ ಮುಂದಿನ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
Advertisement
ಐಸಿಸಿಯ (ICC) ನೂತನ ಅಧ್ಯಕ್ಷರ ಚುನಾವಣೆಗೆ ಜಯ್ ಶಾ ಸ್ಪರ್ಧಿಸುವುದು ಖಚಿತ ಎಂದು ಹೇಳಲಾಗುತ್ತಿದೆ. ಮುಂದಿನ ನವೆಂಬರ್ ತಿಂಗಳಲ್ಲಿ ಐಸಿಸಿ ಚುನಾವಣೆ ಇದೇ ನವೆಂಬರ್ ತಿಂಗಳಲ್ಲಿ ನಡೆಯಲಿದೆ. ಜಯ್ ಶಾ ಅವರು ಮುಂದಿನ ಐಸಿಸಿ ಅಧ್ಯಕ್ಷರಾಗಲು ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳೂ ಬೆಂಬಲ ನೀಡಿವೆ ಎಂದು ವರದಿಗಳು ಉಲ್ಲೇಖಿಸಿವೆ. ಒಂದೊಮ್ಮೆ ಐಸಿಸಿ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೇ ಐಸಿಸಿಯ ಅತ್ಯಂತ ಕಿರಿಯ ಅಧ್ಯಕ್ಷರಾದ ಗೌರವಕ್ಕೆ ಜಯ್ ಶಾ ಪಾತ್ರರಾಗಲಿದ್ದಾರೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 39 ರನ್ – ಯುವರಾಜ್ ಸಿಂಗ್ ದಾಖಲೆ ಮುರಿದ ಡೇರಿಯಸ್
Advertisement
Advertisement
2020ರಲ್ಲಿ ಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ನೇಮಕವಾಗಿದ್ದ ಬಾರ್ಕ್ಲೇ, 2022 ರಲ್ಲಿ ಮರು ಆಯ್ಕೆ ಮಾಡಲಾಗಿತ್ತು. ನ್ಯೂಜಿಲೆಂಡ್ ಮೂಲದ ವಕೀಲ ಗ್ರೆಗ್ ಬಾರ್ಕ್ಲೇ ಕಳೆದ 4 ವರ್ಷಗಳಿಂದ ಐಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ವರ್ಷ ಅವರ ಅಧಿಕಾರವಧಿ ಅಂತ್ಯವಾಗಲಿದ್ದು, 3ನೇ ಅವಧಿಗೆ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ಜಯ್ ಶಾ ಅವರೇ ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಇದನ್ನೂ ಓದಿ: ಐಪಿಎಲ್‌ನಲ್ಲಿ ತನ್ನ ನೆಚ್ಚಿನ ಪ್ರತಿಸ್ಪರ್ಧಿ ತಂಡವನ್ನು ರಿವೀಲ್ ಮಾಡಿದ ಕೊಹ್ಲಿ
Advertisement
35 ವರ್ಷ ವಯಸ್ಸಿನ ಜಯ್ ಶಾ 2019ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆ ಅಲಂಕರಿಸಿದ್ದರು. ಈಗಾಗಲೇ ಐಸಿಸಿ ಸಮಿತಿಯಲ್ಲಿ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಏಷ್ಯನ್ ಕ್ರಿಕೆಟ್ ಮಂಡಳಿ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದೀಗ ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿಂದೆಯೂ ಹಲವು ಬಾರಿ ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅವರು ಸ್ಪಧಿಸಿರಲಿಲ್ಲ. ಆದ್ರೆ ಈ ಬಾರಿ ಜಯ್ ಶಾ ಸ್ಪರ್ಧಿಸುವುದು ಖಚಿತವಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗಳೂರು-ಗದಗ ವೋಲ್ವೋ ಬಸ್ ಪುನಃ ಆರಂಭಿಸುವಂತೆ ಸ್ಪಿನ್ ಮಾಂತ್ರಿಕ ಸುನೀಲ್ ಜೋಷಿ ಮನವಿ