ಮುಂಬೈ: ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ (BCCI Secretary) ಜಯ್ ಶಾ (Jay Shah) ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಮುಂದಿನ ಅಧ್ಯಕ್ಷರ ಆಯ್ಕೆಗೆ ಈ ವರ್ಷದ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಸದ್ಯ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿದ್ದು ಮತ್ತೊಂದು ಅವಧಿಗೆ ಅರ್ಹರಾಗಿದ್ದಾರೆ.
Advertisement
ಈ ಚುನಾವಣೆಯಲ್ಲಿ ಜಯ್ ಶಾ ಅವರು ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಒಂದು ವೇಳೆ ಈ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಈ ಹುದ್ದೆಯನ್ನು ಅಲಂಕರಿಸಿದ್ದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಜಯ್ ಶಾ ಪಾತ್ರವಾಗಲಿದ್ದಾರೆ. ಇದನ್ನೂ ಓದಿ: ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?
Advertisement
Advertisement
ಐಸಿಸಿ ವಾರ್ಷಿಕ ಸಭೆ ಈ ಜುಲೈನಲ್ಲಿ ಕೊಲಂಬೋದಲ್ಲಿ ನಡೆಯಲಿದೆ. ಐಸಿಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಲ್ಲಿಯವರೆಗೆ ಜಯ್ ಶಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅವರು ಐಸಿಸಿ ಕಾರ್ಯಚಟುವಟಿಕೆಗಳಲ್ಲಿ ಬದಲಾವಣೆಗಳನ್ನು ತರಲು ಬಯಸಿದ್ದಾರೆ ಎಂದು ವರದಿಯಾಗಿದೆ.
Advertisement
ಜಯ್ ಶಾ 2009 ರಿಂದ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಈ ಹಿಂದೆ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು 2015 ರಲ್ಲಿ ಬಿಸಿಸಿಐಗೆ ಸೇರ್ಪಡೆಯಾದ ಜಯ್ ಶಾ ಸೆಪ್ಟೆಂಬರ್ 2019 ರಲ್ಲಿ ಮಂಡಳಿಯ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದಾರೆ.
ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ (Sunil Gavaskar) ಅವರು ಕೆಲ ದಿನಗಳ ಹಿಂದೆ ಶಾ ಅವರ ಅಧಿಕಾರಾವಧಿಯಲ್ಲಿ ಭಾರತದಲ್ಲಿ ಕ್ರಿಕೆಟ್ ಬೆಳವಣಿಗೆಯ ಬಗ್ಗೆ ಬಿಸಿಸಿಐ ತೆಗೆದುಕೊಂಡ ನಿರ್ಧಾರಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಹ್ಯಾಟ್ರಿಕ್ ಸಿಕ್ಸರ್ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್ ಶರ್ಮಾ!
ಜಯ್ ಶಾ ಅವರು ಕ್ರಿಕೆಟ್‌ಗೆ ನೀಡಿದ ಕೆಲಸಕ್ಕಿಂತಲೂ ಹೆಚ್ಚಾಗಿ ಅವರ ತಂದೆಯ ರಾಜಕೀಯವನ್ನೇ ಕೇಂದ್ರವಾಗಿರಿಸಿ ಅವರನ್ನು ಟೀಕಿಸುತ್ತಾರೆ. ಹೀಗಿದ್ದರೂ ಮಹಿಳಾ ಪ್ರೀಮಿಯರ್ ಲೀಗ್ ಆರಂಭ, ಪುರುಷರಂತೆ ಮಹಿಳಾ ತಂಡಕ್ಕೆ ಸಮಾನ ವೇತನ, ಐಪಿಎಲ್ ಆಟಗಾರರಿಗೆ ಶುಲ್ಕವನ್ನು ಹೆಚ್ಚಳ ಸೇರಿದಂತೆ ಹಲವಾರು ಗಮನಾರ್ಹ ಕೆಲಸ ಮಾಡಿದ್ದಾರೆ. ದುರದೃಷ್ಟವಶಾತ್ ಕೆಲವರು ರಾಜಕೀಯ ಅಜೆಂಡಾದ ಕಾರಣದಿಂದಾಗಿ ಅವರಿಗೆ ಕ್ರೆಡಿಟ್ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದರು.