ಮುಂಬೈ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಹೇಳಿದ್ದಾರೆ.
#WATCH | Delhi: On the Champion Trophy to be held in Pakistan next year, BCCI vice-president Rajeev Shukla said, “In the case of the Champion Trophy, we will do whatever the Government of India will tell us to do. We send our team only when the Government of India gives us… pic.twitter.com/TeA3dZ5Twn
— ANI (@ANI) May 6, 2024
Advertisement
2025ರ ಏಪ್ರಿಲ್ 7ರಿಂದ ಮೇ 20ರ ವರೆಗೆ ಪಾಕ್ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy) ನಡೆಯಲಿದ್ದು, ಪಾಕಿಸ್ತಾನದ (Pakistan) ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಪಾಕಿಸ್ತಾನಕ್ಕೆ ಟೀಂ ಇಂಡಿಯಾ ತೆರಳಲಿದೆಯೇ ಅನ್ನೋ ಬಗ್ಗೆ ಮಾತನಾಡಿದ ರಾಜೀವ್ ಶುಕ್ಲಾ, ಕೇಂದ್ರ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಅನುಮತಿ ನೀಡಿದರೆ ಭಾರತ ತಂಡವನ್ನು (Team India) ಪಾಕಿಸ್ತಾನಕ್ಕೆ ಕಳುಹಿಸುತ್ತೇವೆ ಎಂದು ತಿಳಿಸಿದ್ದಾರೆ.
Advertisement
ಚಾಂಪಿಯನ್ಸ್ ಟ್ರೋಫಿಯ ಕರಡು ವೇಳಾಪಟ್ಟಿಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಕಳುಹಿಸಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ಇಂಡೋ-ಪಾಕ್ ಕದನ ಯಾಕಿಷ್ಟು ರಣರೋಚಕ – ನೀವು ತಿಳಿಯಲೇಬೇಕಾದ ಸಂಗತಿಗಳಿವು..
Advertisement
Advertisement
ಹೈಬ್ರಿಡ್ ಮಾದರಿಯಲ್ಲಿ ಆಯೋಜನೆಯಾಗುತ್ತಾ?
2023ರ ಏಕದಿನ ಏಷ್ಯಾಕಪ್ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್ ಕ್ರಿಕೆಟ್ ಸಮಿತಿ) ಹೈಬ್ರಿಡ್ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: T20 World Cup: ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಕ್ರಿಕೆಟಿಗರಿಗೆ ಲಕ್ಷ ಲಕ್ಷ ಬಹುಮಾನ ಘೋಷಿಸಿದ ಪಾಕ್!
ಪಾಕ್ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್ ಯುದ್ಧದ ನಂತರವೂ ಭಾರತ ಮತ್ತು ಪಾಕ್ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.
2008ರ ನವೆಂಬರ್ 26 ರಂದು ಪಾಕ್ ಭಯೋತ್ಪಾದಕರು ಮುಂಬೈನಲ್ಲಿ ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕ ಸಂಬಂಧಗಳು ಮತ್ತಷ್ಟು ಹದಗೆಟ್ಟಿತು. ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ತಂಡ ಪಾಲ್ಗೊಂಡಿತ್ತು. ಇದನ್ನೂ ಓದಿ: ನೋವಿನಿಂದ ಬಳಲುತ್ತಿದ್ದರೂ ಸಿಎಸ್ಕೆಗಾಗಿ ಆಡ್ತಿದ್ದಾರೆ ಧೋನಿ – ಮಹಿಗೆ ಇರೋ ಆರೋಗ್ಯ ಸಮಸ್ಯೆ ಏನು?