ಮುಂಬೈ: ಟೀಂ ಇಂಡಿಯಾ ಅನುಭವಿ ಆಟಗಾರ ಶಿಖರ್ ಧವನ್ (Shikhar Dhawan) 2023ರ ಏಕದಿನ ವಿಶ್ವಕಪ್ (ODI World Cup) ಟೂರ್ನಿಗೆ ಟೀಂ ಇಂಡಿಯಾದಿಂದ ಹೊರಬೀಳುವುದು ಖಚಿತವಾಗಿದೆ. ಅಲ್ಲದೇ ವಿಶ್ವಕಪ್‌ಗೂ ಮುನ್ನ ನಡೆಯಲಿರುವ ವೆಸ್ಟ್ ಇಂಡೀಸ್ ಸರಣಿಯಿಂದಲೂ ಶಿಖರ್ ಧವನ್ ಹೊರಬಿದ್ದಿದ್ದಾರೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದ್ದು, ಮತ್ತೆ ಶಿಖರ್ ಧವನ್ ಟೀಂ ಇಂಡಿಯಾ ನಾಯಕತ್ವ ವಹಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Advertisement
ಹೌದು.. ಈ ಬಾರಿ ಚೀನಾದ ಹ್ಯಾಂಗ್‌ಜೂನಲ್ಲಿ ಏಷ್ಯನ್ ಗೇಮ್ಸ್ (Asian Games 2023) ಕ್ರೀಡಾಕೂಟ ನಡೆಯಲಿದ್ದು ಈ ಟೂರ್ನಿಯಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯ ಭಾಗವಾಗಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಈ ಟೂರ್ನಿ ನಡೆಯಲಿದ್ದು, ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಗೆ ಬಿಸಿಸಿಐ (BCCI) ಭಾರತದ ಮಹಿಳಾ ಹಾಗೂ ಪುರುಷರ ತಂಡವನ್ನು ಕಣಕ್ಕಿಳಿಸಲು ಒಪ್ಪಿದೆ. ಟೀಂ ಇಂಡಿಯಾ ಪ್ರಮುಖ ಆಟಗಾರರು ಏಕದಿನ ವಿಶ್ವಕಪ್ ಹಾಗೂ ಏಷ್ಯಾಕಪ್ ಟೂರ್ನಿಗಳಲ್ಲಿ ಬ್ಯೂಸಿಯಾಗಿರೋದ್ರಿಂದ ಭಾರತದ ಪುರುಷರ 2ನೇ ದರ್ಜೆಯ ತಂಡ ಈ ಟೂರ್ನಿಯಲ್ಲಿ ಭಾಗವಹಿಸಲಿದೆ. ಈ ತಂಡಕ್ಕೆ ಶಿಖರ್ ಧವನ್ ನಾಯಕತ್ವ ವಹಿಸುವ ಸಾಧ್ಯತೆಗಳಿವೆ. ಜೊತೆಗೆ ವಿವಿಎಸ್ ಲಕ್ಷ್ಮಣ್ (VVS Laxman) ಕೋಚ್ ಆಗಿ ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ICC ODI World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ
Advertisement
Advertisement
2010 ಮತ್ತು 2014ರ ಏಷ್ಯನ್ ಗೇಮ್ಸ್ ಟೂರ್ನಿಯಲ್ಲಿ ಭಾರತ (Team India) ಭಾಗವಹಿಸಲು ನಿರಾಕರಿಸಿತ್ತು. ಆದ್ರೆ 2028ಕ್ಕೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಸಿಸಿಐ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಏಷ್ಯನ್ ಗೇಮ್ಸ್‌ನಲ್ಲಿ ಟೀಂ ಇಂಡಿಯಾವನ್ನು ಕಣಕ್ಕಿಳಿಸಲು ಸಮ್ಮತಿಸಿದೆ. ಜುಲೈ 7 ರಂದು ಬಿಸಿಸಿಐನ ಮುಂಬರುವ ಅಪೆಕ್ಸ್ ಕೌನ್ಸಿಲ್ ಸಭೆ ನಡೆಯಲಿದ್ದು ಅಲ್ಲಿ ಶಿಖರ್ ಧವನ್ ತಂಡವನ್ನು ಮುನ್ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಭಾರತ Vs ಐರ್ಲೆಂಡ್ T20 ಸರಣಿಗೆ ವೇಳಾಪಟ್ಟಿ ಪ್ರಕಟ – ಇಲ್ಲಿದೆ ಡಿಟೇಲ್ಸ್
Advertisement
ಏಷ್ಯನ್ ಗೇಮ್ಸ್ ನಲ್ಲಿ ಕ್ರಿಕೆಟ್ ಟೂರ್ನಿಯನ್ನು ಟಿ20 ಮಾದರಿಯಲ್ಲಿ ಆಡಿಸಲಾಗುತ್ತದೆ. ಭಾರತ ಸೇರಿದಂತೆ ಏಷ್ಯಾದ ಇತರ ತಂಡಗಳು ಕೂಡ ಈ ಟೂರ್ನಿಯಲ್ಲಿ ಭಾಗವಹಿಸುತ್ತಿದೆ. ಇನ್ನೂ ಮಹಿಳೆಯರ ವಿಭಾಗದಲ್ಲೂ ಈ ಸೆಣೆಸಾಟಗಳು ನಡೆಯಲಿದ್ದು ಮಹಿಳಾ ವಿಭಾಗದಲ್ಲಿ ಭಾರತದ ಮೊದಲ ದರ್ಜೆಯ ತಂಡವೇ ಕಣಕ್ಕಿಳಿಯಲಿದೆ ಎನ್ನಲಾಗಿದೆ. 2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ತಂಡ ಭಾಗವಹಿಸಿತ್ತು. ಇದನ್ನೂ ಓದಿ: ವಿಶ್ವಕಪ್ ಹವಾ; ಅಹಮದಾಬಾದ್‌ನಲ್ಲಿ ಹೋಟೆಲ್‌ಗಳ ಬೆಲೆ ದುಬಾರಿ – ದಿನದ ಬಾಡಿಗೆ 1 ಲಕ್ಷ ರೂ.ವರೆಗೆ ಏರಿಕೆ
Web Stories