ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಇಂದು ನಡೆಯಬೇಕಿದ್ದ ವಾಣಿಜ್ಯ ಶಾಸ್ತ್ರದ 5ನೇ ಸೆಮಿಸ್ಟರ್‌ನ ಪರೀಕ್ಷೆ ರದ್ದಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿದ ವಿವಿ ರಿಜಿಸ್ಟ್ರಾರ್ ಡಾ.ಮೇಧಾವಿನಿ ಕಟ್ಟಿ ಅವರು, ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಬೇಕಿದ್ದ ಮ್ಯಾನೆಜ್‍ಮೆಂಟ್ ಅಕೌಂಟಿಂಗ್ ವಿಷಯದ ಪರೀಕ್ಷೆ ಪ್ರಶ್ನೆ ಪತ್ರಿಕೆ ಬೆಳಗ್ಗೆಯೇ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಸೈಬರ್ ಪೊಲೀಸ್ ಠಾಣೆಗೆ ದೂರು ಕೊಡಲು ವಿವಿ ಮುಂದಾಗಿದೆ. ಪರೀಕ್ಷೆ ರದ್ದುಗೊಳಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇಡಿ ಚಾರ್ಜ್‌ಶೀಟ್ ಸಲ್ಲಿಕೆಗೆ ನಾವು ಹೆದರುವುದಿಲ್ಲ: ಡಿ.ಕೆ.ಸುರೇಶ್
Advertisement
Advertisement
ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಆರೋಪಗಳಿದ್ದು, ಬೀದರ್‌ನ ಲ್ಲೂ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಅನುಮಾನಗಳಿವೆ. ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿತ್ತು. ಇದರಿಂದ ಬಿಕಾಂ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿತ್ತು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ