ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ (Heart Attack) ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನ (Student) ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು – ಸಿದ್ರಾಮಯ್ಯಗೆ ಅಹಿಂದ ರತ್ನ ಘೋಷಣೆಗೆ ಸಿದ್ದತೆ
ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ (BCM Hostel) ಇದ್ದಕ್ಕಿದ್ದಂತೆ ಎದೆನೋವು ಕಾಣಿಡಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಪುನೀತ್ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್ Hourನಲ್ಲಿ ಟ್ರೀಟ್ಮೆಂಟ್


