ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಗುರುವಾರ (ಡಿ.11) ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯಲ್ಲಿ (Nagarbhavi) 140 ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 17ರಲ್ಲಿ 2 ಎಕರೆ 30 ಗುಂಟೆ ಪ್ರದೇಶಗಳಲ್ಲಿ ಅನಧಿಕೃವಾಗಿ ನಿರ್ಮಾಣಗಳನ್ನು ತೆರವುಗೊಳಿಸಿ, ಸುಮಾರು 140 ಕೋಟಿ ರೂ. ಬೆಲೆಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ.ಇದನ್ನೂ ಓದಿ: ಲೋಕಸಭೆಯಲ್ಲಿ ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ರಾಜ್ಯ ಸಂಸದರು
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

