ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು – BDA) ಅನಧಿಕೃತ ನಿರ್ಮಾಣಗಳನ್ನ ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯ 1ನೇ ಹಂತದಲ್ಲಿ 60 ಕೋಟಿ ರೂ. ಆಸ್ತಿಯನ್ನು (BDA Property) ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ (Bengakuru North) ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 78ರ 28 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 8 ಶೆಡ್‌ಗಳನ್ನ ತೆರವುಗೊಳಿಸಿ, ಸುಮಾರು 60 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ. ಇದನ್ನೂ ಓದಿ: ಕೋವಿಡ್ ಅಕ್ರಮ ತನಿಖೆಗೆ ಎಸ್‌ಐಟಿ ರಚನೆ – ಬಿಎಸ್‌ವೈ ವಿರುದ್ಧ ಶೀಘ್ರ FIR ಸಾಧ್ಯತೆ!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಇದನ್ನೂ ಓದಿ: ನವೀಕರಿಸಬಹುದಾದ ಇಂಧನದಲ್ಲಿ ಭಾರತ ಗಮನಾರ್ಹ ಸಾಧನೆ – 24.2 GW ಸಾಮರ್ಥ್ಯ ವೃದ್ಧಿ: ಜೋಶಿ