ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರ ಮಾಡಿದರು. ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಬೊಮ್ಮಾಯಿಗೆ ನಿರ್ಧಾರ ತೆಗೆದುಕೊಳ್ಳೋ ಧೈರ್ಯವಿಲ್ಲ: ಮುಖ್ಯಮಂತ್ರಿ ಚಂದ್ರು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್‌ನಲ್ಲಿರುವ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ JDS ಇಬ್ಬರು ಶಾಸಕರು ಉಚ್ಚಾಟನೆ
ಇದೇ ವೇಳೆ ಮಾತನಾಡಿದ ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನ ನೀಡಿರುವುದು ಸಂತಸ ತಂದಿದೆ ಎಂದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.