ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಗಡಿ ಕಾಯುವ ಯೋಧರು ವೀರಮರಣ ಹೊಂದಿದ್ದಲ್ಲಿ ಅಥವಾ ತೀವ್ರವಾಗಿ ಗಾಯಗೊಂಡ ಯೋಧರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ನಿವೇಶನ ನೀಡಲಾಗುತ್ತಿದೆ.
Advertisement
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹಿಂದೆ ಇಬ್ಬರು ವೀರ ಯೋಧರ ಕುಟುಂಬಗಳಿಗೆ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡಿದ್ದರು. ಬೆಂಗಳೂರು ಮೂಲದ ಒಟ್ಟು 5 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು ಇಂದು ಯೋಧರಾದ ಲಾನ್ಸ್ ನಾಯಕ್ ನಾಗೇಂದ್ರಕುಮಾರ್ ಕೆ.ಎಮ್ ಅವರ ತಾಯಿ ಸರೋಜಮ್ಮ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಆಯುಕ್ತ ರಾಜೇಶ್ ಗೌಡ ಹಾಗೂ ಕಾರ್ಯದರ್ಶಿ ಆನಂದ ಅವರು ಹಕ್ಕು ಪತ್ರ ವಿತರಿಸಿದರು.
Advertisement
Advertisement
ಇನ್ನುಳಿದ ಎರಡು ಕುಟುಂಬಗಳಿಗೆ ನೋಂದಾಯಿತ ಅಂಚೆಯ ಮೂಲಕ ಹಕ್ಕುಪತ್ರಗಳನ್ನು ತಲುಪಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತ ಇಲ್ಲ: ವಿಶ್ವನಾಥ್ ಕಿಡಿ