Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೈಬರ್ ವಂಚನೆ ಬಗ್ಗೆ ಜಾಗೃತರಾಗಿರಬೇಕು: ಎಸಿಪಿ ನಜ್ಮಾ ಫಾರೂಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸೈಬರ್ ವಂಚನೆ ಬಗ್ಗೆ ಜಾಗೃತರಾಗಿರಬೇಕು: ಎಸಿಪಿ ನಜ್ಮಾ ಫಾರೂಕಿ

Dakshina Kannada

ಸೈಬರ್ ವಂಚನೆ ಬಗ್ಗೆ ಜಾಗೃತರಾಗಿರಬೇಕು: ಎಸಿಪಿ ನಜ್ಮಾ ಫಾರೂಕಿ

Public TV
Last updated: December 14, 2025 4:45 pm
Public TV
Share
2 Min Read
nazma farooqi mangaluru
SHARE

ಮಂಗಳೂರು: ಇಂದು ಅಪರಾಧ ಕೃತ್ಯಗಳ ಸ್ವರೂಪ ಬದಲಾಗುತ್ತಿದೆ. ಇಂದಿನ ಯುವಜನತೆ ಮಾದಕ ವಸ್ತು ಸೇವನೆ, ಸೈಬರ್ ಕ್ರೈಂ, ಅತ್ಯಾಚಾರದಂತಹ ಕ್ರಿಮಿನಲ್ ಕೃತ್ಯಗಳಲ್ಲಿ‌ ಹೆಚ್ಚಾಗಿ ಶಾಮೀಲಾಗುತ್ತಿರುವುದು ಆತಂಕಕಾರಿ ವಿಚಾರ. ಅದೇ ರೀತಿ ಆನ್‌ಲೈನ್ ವಂಚನೆಗೊಳಗಾಗಿ ಅದೆಷ್ಟೂ ಮಂದಿ ಹಣ, ಬದುಕನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವುದಲ್ಲದೆ ಜನರೂ ಕೂಡ ಕಾನೂನು, ಮಾನವ ಹಕ್ಕುಗಳು ಮತ್ತು ಕರ್ತವ್ಯಗಳನ್ನು ತಿಳಿಯುವ ಅಗತ್ಯ ಇದೆ ಎಂದು ಎಸಿಪಿ ನಜ್ಮಾ ಫಾರೂಕಿ ಹೇಳಿದ್ದಾರೆ.

ಲಯನ್ಸ್‌ ಇಂಟರ್‌ನ್ಯಾಷನಲ್‌ ಜಿಲ್ಲೆ 317 ಡಿ ವತಿಯಿಂದ ಮಂಗಳೂರಿನ ಬಲ್ಮಠದ ಶಾಂತಿನಿಲಯದಲ್ಲಿ ನಡೆದ ಮಾನವ ಹಕ್ಕುಗಳು ಎನ್ನುವ ವಿಶೇಷ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು.

ಇಂದು ಸೈಬರ್‌ ವಂಚನೆ, ಡಿಜಿಟಲ್‌ ಅರೆಸ್ಟ್‌, ಸಾಮಾಜಿಕ ಜಾಲತಾಣಗಳ ಮೂಲಕ ಬ್ಲ್ಯಾಕ್‌ಮೇಲ್‌, ಯುಪಿಎ ಸ್ಕ್ಯಾನ್‌ ಹೆಸರಲ್ಲಿ ವಂಚನೆ, ಸಾಮಾಜಿಕ ಜಾಲತಾಣಗಳಲ್ಲಿ ಇನ್ನೊಬ್ಬರ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುವುದು, ಸೆಲೆಬ್ರಿಟಿಗಳ ಫೋಟೋಗಳನ್ನು ಮಾರ್ಫ್‌ ಮಾಡಿ ವಂಚಿಸುವುದು, ಎಪಿಕೆ ಫೈಲ್‌ಗಳ ಮೂಲಕ ವಂಚನೆ, ಕೆವೈಸಿ, ಆಧಾರ್‌ ಅಪ್ಡೇಟ್‌ ಹೆಸರಲ್ಲಿ ವಂಚನೆ, ಹಣ ಡಬಲ್‌ ಆಗುತ್ತದೆ ಎಂದು ಹಣ ಹೂಡಿಸಿ ಮೋಸ ಮಾಡುವುದು ಜಾಸ್ತಿಯಾಗಿ ನಡೆಯುತ್ತಿದೆ. ಹಾಗಾಗಿ ನಾವಿಂದು ಎಷ್ಟು ಜಾಗೃತಿ ಮೂಡಿಸಿದರೂ ಸಾಲವುದಿಲ್ಲ. ಕೆವೈಸಿ ಅಪ್ಡೇಟ್‌, ಒಟಿಪಿ ಕೇಳಿದರೆ ಕೊಡಬಾರದು, ಕಸ್ಟಮ್ಸ್‌ ಹೆಸರಲ್ಲಿ ಯಾರಾದರೂ ಹೆದರಿಸಿದರೆ ಅವರಿಗೆ ಹಣ ಕೊಡಬಾರದು. ಡಿಜಿಟಲ್‌ ಅರೆಸ್ಟ್‌ ಎನ್ನುವ ಪರಿಕಲ್ಪನೆಯೇ ನಮ್ಮಲ್ಲಿಲ್ಲ. ಹಣ ಕಳೆದುಕೊಂಡವರು ಗೋಲ್ಡನ್‌ ಅವರ್‌ ನಲ್ಲಿ 1930ಗೆ ಕರೆ ಮಾಡಿದರೆ ಹಣ ವಾಪಸ್‌ ಪಡೆಯಲು ಸಾಧ್ಯ. ಡಿಜಿಟಲ್‌ ವಂಚನೆ ಪ್ರಕರಣಗಳಲ್ಲಿ ಈ ವರ್ಷ ಕಳೆದುಕೊಂಡಕ್ಕಿಂದ ಅತೀ ಕಡಿಮೆ ಹಣ ರಿಕವರಿ ಮಾಡಲಾಗಿದೆ. ಹಾಗಾಗಿ ನಾವು ಸ್ವಯಂ ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು.

ಮಕ್ಕಳು ಮಾದಕ ವಸ್ತುಗಳಿಂದ ದೂರ ಇರಬೇಕು. ಕೆಲವೊಂದು ಅಪರಾಧಿ ಕೃತ್ಯಗಳನ್ನು ಕುತೂಹಲಕ್ಕೆಂದೂ ಮಾಡಿದರೂ ಅದು ಅಪರಾಧವೇ ಆಗುತ್ತದೆ. ಕಮಿಷನರ್‌ ಸುಧೀರ್‌ ರೆಡ್ಡಿ ಕಾಲೇಜ್‌ಗಳಲ್ಲಿ ರಾಂಡಂ ಪರೀಕ್ಷೆ ಮಾಡಿಸಿ ಮಕ್ಕಳನ್ನು ಮಾದಕ ವ್ಯಸನಕ್ಕೀಡಾದಂತೆ ಜಾಗೃತಿ ಮೂಡಿಸುತ್ತಿದ್ದಾರೆ. ನಿಮ್ಮ ಸ್ನೇಹಿತರ್ಯಾರೂ ಮಾದಕ ವ್ಯಸನಕ್ಕೆ ಸಿಲುಕಿದ್ದರೆ ಪೊಲೀಸರಿಗೆ ಮಾಹಿತಿ ನೀಡಿದರೆ ಅವರನ್ನು ಈ ವ್ಯಸನದಿಂದ ಮುಕ್ತಗೊಳಿಸಬಹುದು. ಮಕ್ಕಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರಲ್ಲದೆ, ಮಾದಕ ವಸ್ತುಗಳನ್ನು ಮುಟ್ಟುವುದಿಲ್ಲ ಎಂದು ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಡ್ವಕೇಟ್‌ ಉದಾಯನಂದ ಕೆ ಪ್ರಧಾನ ಭಾಷಣ ಮಾಡಿದರು, ಈ ವೇಳೆ ಬಿ.ಪಿ.ಆಚಾರ್‌ ಬರೆದ ಮಾನವ ಹಕ್ಕುಗಳ ಕುರಿತ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ ಕಾಲೇಜು ಮಕ್ಕಳಿಂದ ಮಾನವ ಹಕ್ಕು ಕುರಿತು ಪ್ಯಾನೆಲ್‌ ಡಿಸ್ಕಷನ್‌, ರಸಪ್ರಶ್ನೆ, ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಗವರ್ನರ್‌ ಕುಡ್ಪಿ ಅರವಿಂದ ಶೆಣೈ ಉದ್ಘಾಟಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಸಂಯೋಜಕ ಎಡ್ವಿನ್‌ ವಾಲ್ಟರ್‌ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಂಎಚ್‌ ಕರುಣಾಕರ್‌, ಬಿ.ಎಸ್.‌ರೈ, ಕೆ.ಚಂದ್ರಮೋಹನ್‌ ರಾವ್, ಪ್ರಜ್ವಲ್‌ ಯು.ಎಸ್.‌, ಎಂ.ಟಿ.ರಾಜಾ, ಜ್ಯೋತಿ ಎಸ್.‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಆಶಾ ಚಂದ್ರಮೋಹನ್ ಕಾರ್ಯಕ್ರಮ ನಿರೂಪಿಸಿದರು.

TAGGED:cyber FraudMangaluruNazma Farooqiನಜ್ಮಾ ಫಾರೂಕಿಮಂಗಳೂರುಸೈಬರ್ ಅಪರಾಧ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

MLC Govindaraju
Districts

ಬೆಂಗಳೂರಿನಲ್ಲಿ ಭಿಕ್ಷಾಟನೆ ಮಾಫಿಯಾವಿದ್ದು ಕ್ರಮ ಕೈಗೊಳ್ಳಿ: ಗೋವಿಂದರಾಜು

Public TV
By Public TV
12 minutes ago
Shivaraj Tangadagi
Bengaluru City

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Public TV
By Public TV
31 minutes ago
KH Muniyappa
Bengaluru City

ಹೋಟೆಲ್‌ಗಳಿಗೆ ಒಂದು ವಾರ, 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Public TV
By Public TV
52 minutes ago
pds kerosene
Latest

ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ – ಗ್ರಾಮೀಣ ಭಾಗದಲ್ಲಿ 45 ದಿನಕ್ಕೆ ಒಂದು ಸಿಲಿಂಡರ್‌

Public TV
By Public TV
60 minutes ago
Prahlad Joshi 1
Latest

ದೇಶದ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರಪಾಲು – ಜೋಶಿ

Public TV
By Public TV
1 hour ago
Cement lorry fell 50 feet deep driver cleaner miraculously escape mudigere chikmagaluru 2
Chikkaballapur

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ – ಚಾಲಕ, ಕ್ಲೀನರ್ ಪವಾಡಸದೃಶ ಪಾರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?