ನವದೆಹಲಿ: ಏಕದಿನ ವಿಶ್ವಕಪ್ (Cricket World Cup 2023) ವೀಕ್ಷಣೆಗೆ ಟಿಕೆಟ್ಗಳ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ. ಆಗಸ್ಟ್ 25 ರಿಂದ ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಖರೀಸಿದಬಹುದಾಗಿದೆ.
ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್ನ ಪರಿಷ್ಕೃತ ವೇಳಾಪಟ್ಟಿಯನ್ನು ಐಸಿಸಿ ಆಗಸ್ಟ್ 9 ರಂದು ಬಿಡುಗಡೆ ಮಾಡಿದೆ. ನೂತನ ವೇಳಾಪಟ್ಟಿಯಲ್ಲಿ ಐಸಿಸಿ ಒಟ್ಟು 9 ಪಂದ್ಯಗಳ ದಿನಾಂಕವನ್ನು ಬದಲಾಯಿಸಿದೆ. ಈ 9 ಪಂದ್ಯಗಳಲ್ಲಿ ಟೀಂ ಇಂಡಿಯಾದ 2 ಪಂದ್ಯಗಳು ಸೇರಿದ್ದರೆ, ಪಾಕಿಸ್ತಾನದ 3 ಪಂದ್ಯಗಳು ಸೇರಿವೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 15 ರಂದು ನಡೆಯಬೇಕಿದ್ದ ಭಾರತ (Team India) ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಈಗ ಅಕ್ಟೋಬರ್ 14 ರಂದು ನಡೆಯಲಿದೆ. ಹಾಗೆಯೇ ನವೆಂಬರ್ 12 ರಂದು ನಡೆಯಬೇಕಿದ್ದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ನವೆಂಬರ್ 11 ರಂದು ನಡೆಯಲಿದೆ. ಪಂದ್ಯಗಳ ದಿನಾಂಕಗಳ ಬದಲಾವಣೆಯ ಮಾಹಿತಿ ಜೊತೆಗೆ ವಿಶ್ವಕಪ್ ಪಂದ್ಯಗಳ ಟಿಕೆಟ್ ಮಾರಾಟದ ಬಗ್ಗೆಯೂ ಐಸಿಸಿ ಮಾಹಿತಿ ಹಂಚಿಕೊಂಡಿದೆ.
ಕ್ರಿಕೆಟ್ ಅಭಿಮಾನಿಗಳು 2 ರೀತಿಯಲ್ಲಿ ಟಿಕೆಟ್ ಖರೀದಿಸಬಹುದು. ಟಿಕೆಟ್ಗಳು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಲಭ್ಯವಿರುತ್ತವೆ. ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಐಸಿಸಿ ವೆಬ್ಸೈಟ್ನಿಂದ ಖರೀದಿಸಬಹುದಾಗಿದ್ದು, ಆಗಸ್ಟ್ 25 ರಿಂದ ಆನ್ಲೈನ್ ಟಿಕೆಟ್ ಮಾರಾಟ ಆರಂಭವಾಗಲಿದೆ. ಆದಾಗ್ಯೂ, ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳ ಟಿಕೆಟ್ಗಳನ್ನು ಸೆಪ್ಟೆಂಬರ್ 15 ರಿಂದ ಖರೀದಿಸಬಹುದಾಗಿದೆ. ಇದನ್ನೂ ಓದಿ: 77th Independence Day: ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿ ಆಚರಿಸಿದ ಸ್ಟಾರ್ ಕ್ರಿಕೆಟಿಗರು
ಟೀಂ ಇಂಡಿಯಾ ಪಂದ್ಯಗಳ ಟಿಕೆಟ್ ಮಾರಾಟ ವೇಳಾಪಟ್ಟಿ
ಆಗಸ್ಟ್ 25 ರಂದು ಟೀಂ ಇಂಡಿಯಾವನ್ನು ಹೊರತುಪಡಿಸಿದ ಅಭ್ಯಾಸ ಪಂದ್ಯಗಳು ಮತ್ತು ಇತರ ಪಂದ್ಯಗಳ ಟಿಕೆಟ್ ಖರೀದಿಗೆ ಅವಕಾಶವಿರಲಿದೆ.
ಆಗಸ್ಟ್ 30 ರಂದು ಗುವಾಹಟಿ ಮತ್ತು ತಿರುವನಂತಪುರದಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್ಗಳನ್ನು ಖರೀದಿಸಬಹುದಾಗಿದೆ.
ಆಗಸ್ಟ್ 31 ರಂದು ಚೆನ್ನೈ, ದೆಹಲಿ ಮತ್ತು ಪುಣೆಯಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್ಗಳ ಖರೀದಿಗೆ ಲಭ್ಯವಿರಲಿವೆ.
ಸೆಪ್ಟೆಂಬರ್ 1 ರಂದು ಧರ್ಮಶಾಲಾ, ಲಕ್ನೋ ಮತ್ತು ಮುಂಬೈನಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್ಗಳನ್ನು ಖರೀದಿಸಬಹುದಾಗಿದೆ.
ಸೆಪ್ಟೆಂಬರ್ 2 ರಂದು ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ನಡೆಯಲ್ಲಿರುವ ಟೀಂ ಇಂಡಿಯಾದ ಪಂದ್ಯಗಳ ಟಿಕೆಟ್ಗಳನ್ನು ಖರೀದಿಸಬಹುದಾಗಿದೆ.
ಸೆಪ್ಟೆಂಬರ್ 3 ರಂದು ಅಹಮದಾಬಾದ್ನಲ್ಲಿ ನಡೆಯಲ್ಲಿರುವ ಭಾರತದ ಪಂದ್ಯಗಳ ಟಿಕೆಟ್ಗಳನ್ನು ಖರೀದಿಸಬಹುದಾಗಿದೆ.
ಸೆಪ್ಟೆಂಬರ್ 15 ರಂದು ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯದ ಟಿಕೆಟ್ಗಳನ್ನು ಮಾರಾಟ ಮಾಡಲಾಗುತ್ತದೆ.
Web Stories