ಚಿತ್ರದುರ್ಗ: ಸಾರಿಗೆ ಬಸ್ ನಿಲ್ದಾಣದ (Bus Stand) ಬಳಿ ಕರಡಿ (Bear) ಪ್ರತ್ಯಕ್ಷವಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ (Challakere) ನಗರದಲ್ಲಿ ನಡೆದಿದೆ.
ಕಳೆದ ರಾತ್ರಿ ಸಾರಿಗೆ ಬಸ್ ನಿಲ್ದಾಣ ಬಳಿ ಕರಡಿ ಓಡಾಟ ನಡೆಸಿದ್ದು, ಆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜನನಿಬಿಡ ಸ್ಥಳವಾದ ಬಸ್ ನಿಲ್ದಾಣದಲ್ಲಿ ತಡರಾತ್ರಿ ಕರಡಿ ಓಡಾಟ ನಡೆಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ
ಆದರೆ ನಗರದ ಮಧ್ಯದಲ್ಲಿರುವ ಬಸ್ ನಿಲ್ದಾಣದ ಬಳಿ ಕರಡಿ ಸಂಚರಿಸಿರೋದು ಸಾರ್ವಜನಿಕರಲ್ಲಿ ಅಚ್ಚರಿ ಹಾಗೂ ಭಯದ ವಾತಾವರಣ ಸೃಷ್ಟಿಸಿದೆ. ಹೀಗಾಗಿ ಸಂಬಂಧಪಟ್ಟವರು ಕೂಡಲೇ ಕರಡಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಚಳ್ಳಕೆರೆ ಪಟ್ಟಣ ನಿವಾಸಿಗಳು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ: ಯು.ಟಿ ಖಾದರ್
