ವ್ಯಕ್ತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಮಕ್ಕಳಿಂದ ಮಹಿಳೆ ಮೇಲೆ ಹಲ್ಲೆ

Public TV
1 Min Read
POLICE

ಹುಬ್ಬಳ್ಳಿ: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ಹೆಂಡತಿ ಹಾಗೂ ಮಕ್ಕಳು ಸೇರಿಕೊಂಡು ಮಹಿಳೆ (Woman) ಒಬ್ಬಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ (Hubballi) ನಡೆದಿದೆ.

ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ವ್ಯಕ್ತಿಯೋರ್ವನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಇದನ್ನು ನೆಪವಾಗಿಟ್ಟುಕೊಂಡು ಆ ವ್ಯಕ್ತಿಗೆ ಮಹಿಳೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಬೇಸತ್ತ ಕುಟುಂಬಸ್ಥರು ಆಕೆ ಕೆಲಸ ಮಾಡುವ ಸ್ಥಳಕ್ಕೆ ತೆರಳಿ ಇಟ್ಟಿಗೆ ಹಾಗೂ ಇನ್ನಿತರ ವಸ್ತುಗಳಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಗ್ರಾಹಕರಿಗೆ ರಶೀದಿ ನೀಡದೆ 1.62 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

ಈ ವೇಳೆ ಗಲಾಟೆ ಬಿಡಿಸಲು ಬಂದ ಮಹಿಳೆಯ ಅಕ್ಕನ ಮೇಲೂ ಹಲ್ಲೆ ನಡೆಸಿದ್ದಾರೆ. ಗಲಾಟೆ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಪೊಲೀಸರು (Police) ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ಸಂಬಂಧ ಗಲಾಟೆಯಲ್ಲಿ ಭಾಗಿಯಾದ ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಎಟಿಎಂ ಕೊರೆದು 20 ಲಕ್ಷ ಹಣ ದೋಚಿದ ಕಳ್ಳರು

Share This Article