ಹಾವೇರಿ: ಬಿಸಿಲಿನ ತಾಪಮಾನ ಹೆಚ್ಚಳಗೊಂಡ ಪರಿಣಾಮ ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ವಿದ್ಯಾನಗರದಲ್ಲಿರೋ ಕೆ.ಎಲ್.ಇ ಶಿಕ್ಷಣಸಂಸ್ಥೆಯ ಕಟ್ಟಡದಲ್ಲಿರೋ ಜೇನುಹುಳುಗಳು ದಾಳಿ ಮಾಡಿ 40 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಒಂದು, ಎರಡು ಹಾಗೂ ಮೂರನೇ ತರಗತಿಯ ವಿದ್ಯಾರ್ಥಿಗಳ ಕೊಠಡಿ ಬಳಿ ಇರೋ ಹೆಜ್ಜೇನು ಮಕ್ಕಳಿಗೆ ಕಚ್ಚಿ ಗಾಯಗೊಳಿಸಿವೆ.
Advertisement
Advertisement
ಕೂಡಲೇ ವಿದ್ಯಾರ್ಥಿಗಳನ್ನ ಅಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ಪೋಷಕರಿಗೆ ತಿಳಿಯುತ್ತಿದ್ದಂತೆ ಶಾಲೆಯ ಮುಂದೆ ಪೋಷಕರು ಜಮಾವಣೆಗೊಂಡಿದ್ದಾರೆ. ನಗರಸಭೆಯ ಸಿಬ್ಬಂದಿ ಹೆಜ್ಜೇನು ಇರೋ ಕಡೆ ಫಾಗಿಂಗ್ ವ್ಯವಸ್ಥೆ ಮಾಡಿ ಹೆಜ್ಜೇನು ನಿಯಂತ್ರಣ ಮಾಡುವ ವ್ಯವಸ್ಥೆ ಮಾಡಿದ್ದಾರೆ.
Advertisement
Advertisement
ಈ ಘಟನೆಯಲ್ಲಿ ಯಾವುದೇ ಮಕ್ಕಳಿಗೆ ಪ್ರಾಣಾಪಾಯವಾಗಿಲ್ಲ. ಕೆಲಕಾಲ ಪೋಷಕರು ಆತಂಕಕ್ಕೆ ಒಳಗಾಗಿ, ಮಕ್ಕಳನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಿದ್ದಾರೆ.