ಹಾವೇರಿ: ಲೋಕಸಭಾ ಚುನಾವಣೆ (Loksabha Election) ಮುಂಚೆ ಅಥವಾ ಚುನಾವಣೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಜೈಲಿಗೆ ಹೋಗೋದು ಫಿಕ್ಸ್ ಎಂದು ಕೆ.ಎಸ್. ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕನಕ ಜಯಂತಿ ಕಾರ್ಯಕ್ರಮದ ನಿಮಿತ್ತ ಹಾವೇರಿಗೆ (Haveri) ಆಗಮಿಸಿದ್ದ ಮಾಜಿ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಿಬಿಐ ತನಿಖೆ ಮುಂದುವರಿಸಲು ಅಭ್ಯಂತರ ಇಲ್ಲ ಎಂದು ಕೋರ್ಟ್ ಹೇಳಿದೆ. ಮೇಲ್ನೋಟಕ್ಕೆ ಡಿಕೆಶಿ ಅಕ್ರಮ ಹಣ ಸಂಪಾದನೆ ಮಾಡಿರೋದು ಬಹಿರಂಗ ಆಗಿದೆ. ನೂರಾರು ಕೋಟಿ ಹಣ ಸಿಕ್ಕಿರೋದು ಇಡೀ ರಾಜ್ಯದ ಜನ ನೋಡಿದ್ದಾರೆ. ಸಿಬಿಐ ತನಿಖೆ ಆಗಿದೆ, ಅವರು ಜೈಲಿಗೆ ಹೋಗೋದ್ರಲ್ಲಿ ಯಾವುದೇ ಸಂಶಯ ಇಲ್ಲ. ಲೋಕಸಭಾ ಚುನಾವಣೆ ಮುನ್ನ ಅಥವಾ ಚುನಾವಣೆಯ ಬಳಿಕ ಡಿಕೆಶಿ ಜೈಲಿಗೆ ಹೋಗೋದು ಖಚಿತ ಎಂದರು.
Advertisement
Advertisement
ಇದೇ ವೇಳೆ ಜಾತಿ ಗಣತಿ ವರದಿ ಬಿಡುಗಡೆ ವಿಚಾರದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಹರಿಹಾಯ್ದ ಈಶ್ವರಪ್ಪ, ಜಾತಿ ಜನ ಗಣತಿ ಕೇಂದ್ರ ಸರ್ಕಾರದ ಕರ್ತವ್ಯ. ಪ್ರಧಾನಿ ಮೋದಿ (Narendra Modi) ಕೂಡಾ ಜಾತಿ ಗಣತಿ ಮಾಡ್ತೀವಿ ಅಂದಿದ್ದಾರೆ. ಬಿಹಾರದಲ್ಲಿ ಈಗಾಗಲೇ ವರದಿ ರಿಲೀಸ್ ಮಾಡಿದರು. ಆದರೆ ಕರ್ನಾಟಕ ರಾಜ್ಯದಲ್ಲಿ ರಿಪೋರ್ಟ್ ರೆಡಿ ಇದ್ರೂ ಬಿಡುಗಡೆ ಆಗಲಿಲ್ಲ ಎಂದರು. ಇದನ್ನೂ ಓದಿ: ನಿತೀಶ್ ಕುಮಾರ್‌ಗೆ ಅನಾರೋಗ್ಯ- ಇಂದಿನ ಎಲ್ಲಾ ಕಾರ್ಯಕ್ರಮಗಳ ಭೇಟಿ ಕ್ಯಾನ್ಸಲ್
Advertisement
Advertisement
ಈ ನವೆಂಬರ್ ನಲ್ಲಿಯೂ ಬಿಡುಗಡೆ ಮಾಡಲಿಲ್ಲ. ಈ ವಿಚಾರವಾಗಿ ಲಿಂಗಾಯತರು- ಒಕ್ಕಲಿಗರು ಎದ್ದು ಕೂತಿದ್ದಾರೆ. ಸಮಸ್ಯೆ ಸೃಷ್ಟಿ ಮಾಡಿದವರೇ ಸಿದ್ದರಾಮಯ್ಯ. ಜಾತಿ ಗಣತಿ ಬಿಡುಗಡೆ ಮಾಡಿದರೆ ಅಂದೇ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಹೇಳಿದರು.