ಬೆಂಗಳೂರು: ಟ್ರಾಫಿಕ್ ಸಿಗ್ನಲ್, ಬಸ್ ನಿಲ್ದಾಣ, ದೇವಸ್ಥಾನಗಳಲ್ಲಿ ಭಿಕ್ಷುಕರು (Beggars) ಇರುವುದು ಸಾಮಾನ್ಯ. ಆದರೆ ಈಗ ಭಿಕ್ಷುಕರು ನಮ್ಮ ಮೆಟ್ರೋಗೂ (Namma Metro) ಲಗ್ಗೆ ಇಟ್ಟಿದ್ದಾರೆ.
ಹೌದು. ನಮ್ಮ ಮೆಟ್ರೋ ರೈಲು ಒಳಗಡೆ ವಿಶೇಷ ಚೇತನ ವ್ಯಕ್ತಿಯೊಬ್ಬ ಭಿಕ್ಷಾಟನೆ ಮಾಡಿದ್ದಾನೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ ಮಾರ್ಗದ ಮೆಟ್ರೋದಲ್ಲಿ ಪ್ರಯಾಣಿಕರಂತೆ ಬಂದ ವ್ಯಕ್ತಿ ಭಿಕ್ಷೆ ಬೇಡಿದ್ದಾನೆ. ಇದನ್ನೂ ಓದಿ: ನಟ ಅಲ್ಲು ಅರ್ಜುನ್ ಬಂಧನ – ಪೊಲೀಸರ ನಡೆ ಸಮರ್ಥಿಸಿಕೊಂಡ ತೆಲಂಗಾಣ ಸಿಎಂ
ತನ್ನ ದೈಹಿಕ ಊನವನ್ನು ತೋರಿಸಿ ಭಿಕ್ಷಾಟನೆ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆದು ಭಿಕ್ಷೆ ಬೇಡಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ.
ಮೆಟ್ರೋ ರೈಲಿನಲ್ಲಿ ಭಿಕ್ಷೆ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ನಮ್ಮ ಮೆಟ್ರೊದಲ್ಲೂ ಭಿಕ್ಷುಕರು ಭಿಕ್ಷೆ ಬೇಡುವುದಕ್ಕೂ ಶುರು ಮಾಡಿದ್ರಾ ಎಂಬ ಪ್ರಶ್ನೆಗಳನ್ನು ನೆಟ್ಟಿಗರು ಕೇಳುತ್ತಿದ್ದಾರೆ.