ಕೊಲ್ಕತ್ತಾ: 2024ರ ಸಾರ್ವತ್ರಿಕ ಚುನಾವಣೆ ವೇಳೆಗೆ ಬಿಜೆಪಿ (BJP) ಅಂತ್ಯ ಶುರುವಾಗಲಿದೆ ಎಂದು ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ.
My salutations to the people of Karnataka for their decisive mandate in favour of change!! Brute authoritarian and majoritarian politics is vanquished!! When people want plurality and democratic forces to win, no central design to dominate can repress their spontaneity : that is…
— Mamata Banerjee (@MamataOfficial) May 13, 2023
ಜನ ಪ್ರಜಾಪ್ರಭುತ್ವವನ್ನು ಬಯಸಿದ್ದಾರೆ, ಅವರನ್ನು ತಡೆಯಲು ಸಾಧ್ಯವಿಲ್ಲ. ಕರ್ನಾಟಕದ (Karnataka) ಜನತೆ ಬಿಜೆಪಿಯನ್ನು ಕೆಳಗಿಳಿಸಿದ್ದಾರೆ. ಈ ಮೂಲಕ ಬಿಜೆಪಿಯ ಅಂತ್ಯ ಶುರುವಾಗಿದೆ. ಈ ನಿರ್ಧಾರ ತೆಗೆದುಕೊಂಡ ಕರ್ನಾಟದ ಮತದಾರರಿಗೆ ನಾನು ನಮಸ್ಕರಿಸುತ್ತೇನೆ. ಕರ್ನಾಟಕದಲ್ಲಿ ಕುಮಾರಸ್ವಾಮಿಯವರ ಜೆಡಿಎಸ್ (JDS) ಪಕ್ಷ ಕೂಡ ಬಿಜೆಪಿ ಸೋಲಿಗೆ ಶ್ರಮಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ, ಸಿದ್ದು ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕದಲ್ಲಾದ ಪರಿಸ್ಥಿತಿ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿಗೆ ಆಗಲಿದೆ. ಛತ್ತೀಸ್‍ಗಢ ಹಾಗೂ ಮಧ್ಯಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಾಣಲಿದೆ. ಕಾಂಗ್ರೆಸ್‍ನ ಗೆಲುವು ನೈತಿಕತೆಗೆ ಸಿಕ್ಕ ಗೆಲುವಾಗಿದೆ ಎಂದಿದ್ದಾರೆ.
ಅಲ್ಲದೆ ಟ್ವಿಟ್ಟರ್‌ನಲ್ಲಿ ಕರ್ನಾಟಕದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವಾಗಿದೆ. ನಿರಂಕುಶ ಪ್ರಭುತ್ವ ಸೋಲು ಕಂಡಿದೆ. ಇದೊಂದು ನೈತಿಕ ಪಾಠವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ. ಹೆಚ್ ಮುನಿಯಪ್ಪ