– ಹಿಂದೆ ವೀರೇಂದ್ರ ಪಾಟೀಲ್‌ರನ್ನು ಇಳಿಸಲು ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿದ್ರು
– ಮೆರವಣಿಗೆಗೆ ಅನುಮತಿ ನೀಡಿ ಈಗ ಸಂಘಟಕರನ್ನೇ ಆರೋಪಿ ಮಾಡೋದು ಎಷ್ಟು ಸರಿ?
ಮಂಡ್ಯ: ನಾಗಮಂಗಲದ (Nagamangala) ಕೃತ್ಯದ ಹಿಂದೆ ಕಾಂಗ್ರೆಸ್ (Congress) ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.
Advertisement
ನಾಗಮಂಗಲದ ಗಲಭೆ ಪೀಡಿತ ಸ್ಥಳಗಳನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ಇಳಿಸಲು ರಾಮನಗರ, ಚನ್ನಪಟ್ಟಣದಲ್ಲಿ ಗಲಾಟೆ ನಡೆದಿತ್ತು. ಆಗ ಕಾಂಗ್ರೆಸ್‌ನವರೇ ಬೆಂಕಿ ಹಚ್ಚಿ ಗಲಾಟೆ ಮಾಡಿಸಿದ್ದರು. ಅದು ಕೋಮು ಗಲಭೆ ಆಗಿರಲಿಲ್ಲ. ಮುಂದೆ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ. ಅದಕ್ಕಾಗಿ ಹೀಗೆ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ನಾಗಮಂಗಲ ಗಲಭೆ | ಎಲ್ಲರನ್ನೂ A1 ಮಾಡಲು ಅಗುತ್ತಾ?: ಬಿಜೆಪಿ ನಾಯಕರಿಗೆ ಚಲುವರಾಯಸ್ವಾಮಿ ತಿರುಗೇಟು
Advertisement
ಗಣೇಶ ಕೂರಿಸಿದವರನ್ನೇ ಎಫ್‌ಐಆರ್‌ನಲ್ಲಿ ಎ1 ಆರೋಪಿಯನ್ನಾಗಿ ಮಾಡಿದ್ದೀರಾ. ಇದು ನಿಮ್ಮ ನಡವಳಿಯನ್ನು ತೋರಿಸುತ್ತೆ. ಪೊಲೀಸರ ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದನ್ನು ಹಾಳು ಮಾಡಿಕೊಳ್ಳುವುದು ಬೇಡ. ಅಮಾಯಕರನ್ನು ಬಂಧಿಸಿರೋದು ತಪ್ಪು. ಆ ಅಮಾಯಕರು ಜೈಲಿನಿಂದ ಬರೋದು ಯಾವಾಗ? ಹಿಂದೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಗಲಭೆಯ ಸ್ಪಾನ್ಸರ್ ಕಾಂಗ್ರೆಸ್ ನಾಯಕರು. ಅಲ್ಲಿ ಜೈಲಿಗೆ ಹೋದವರು ಈಗ ಏನು ಮಾಡುತ್ತಾ ಇದ್ದಾರೆ. ಈ ರೀತಿ ನಾಗಮಂಗಲದಲ್ಲೂ ಆಗಬೇಕಾ ಎಂದು ಪ್ರಶ್ನಿನಿಸಿದರು.
Advertisement
Advertisement
ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ, ನಷ್ಟವಾದ ವ್ಯಾಪರಿಗಳಿಗೆ ವೈಯಕ್ತಿಕವಾಗಿ ನಾನು ಆರ್ಥಿಕ ಸಹಾಯ ಮಾಡುತ್ತೇನೆ. ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡುತ್ತೇನೆ. ಎಲ್ಲರೂ ಸಮಾನವಾಗಿ ಪರಿಹಾರ ನೀಡುತ್ತೇನೆ. ನಾನು ಎರಡು ಧರ್ಮದವರಿಗೂ ಸಹಾಯ ಮಾಡುತ್ತೇನೆ ಎಂದರು. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಜಾಮೀನು ಮಂಜೂರು
ಗಲಭೆಯ ಎಫ್‌ಐಆರ್ ಓದಿದ ಹೆಚ್‌ಡಿಕೆ ಕಳೆದ ವರ್ಷವೂ ಇಲ್ಲಿ ಗಲಾಟೆ ಆಗಿತ್ತು. ಈಗ ಮೆರವಣಿಗೆ ಆಗುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾಗಿತ್ತು. ಎಲ್ಲಾ ಕಡೆ ಮೆರವಣಿಗೆಯಲ್ಲಿ ಡಿಜೆ ಹಾಕುತ್ತಾರೆ. ಅಲ್ಲಿ ಒಂದೊಂದು ಕೋಮಿನವರು ಘೋಷಣೆ ಕೂಗುತ್ತಾರೆ. ಘೋಷಣೆಗಳನ್ನು ಕೂಗುವಾಗ ಒಂದೊಂದು ಬಾರಿ ಘರ್ಷಣೆ ಆಗುತ್ತೆ. ರಾಜ್ಯದಲ್ಲಿ ಒಂದೆರಡು ಜಿಲ್ಲೆಯನ್ನು ಹೊರತುಪಡಿಸಿ ಸಾಮರಸ್ಯ ಇದೆ. ಹೊಂದಾಣಿಕೆಯಿಂದ ಹೋಗುವ ರಾಜ್ಯ ಇದು. ಒಂದೊಂದು ಪಕ್ಷಗಳು ಒಂದೊಂದು ಕೋಮುಗಳನ್ನು ಓಲೈಸಿಕೊಳ್ಳುತ್ತವೆ. ನಾನು ಜನಪ್ರತಿನಿಧಿಯಾಗಿ ವೈಯಕ್ತಿಕವಾಗಿ ಯಾರನ್ನು ಓಲೈಸಿಕೊಂಡಿಲ್ಲ. ಒಬ್ಬರ ಪರ ನಾನು ಎಂದು ನಿಂತಿಲ್ಲ ಎಂದರು.
ಕಾಂಗ್ರೆಸ್ ನಾಯಕರು ನಿಮ್ಮ ನಡವಳಿಕೆಯನ್ನು ನೋಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡು ಸಮಾಜದವರು ಸೌಹಾರ್ದತೆಯಿಂದ ಜೀವನ ಮಾಡುತ್ತಾ ಇದ್ದಾರೆ. ರಾಜಕೀಯ ಸಂಘಟನೆಗಾಗಿ ಜನರ ಬದುಕು ಛಿದ್ರ ಮಾಡಬೇಡಿ. ಗೃಹ ಸಚಿವರು ಇದು ಸಣ್ಣ ವಿಷಯ, ಇದಕ್ಕೆ ಮಹತ್ವ ಕೋಡೋದು ಬೇಡಾ ಅಂತಾರೆ. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಬರೆಯುವ ಸಮಯ ಕಡಿತ ಮಾಡಿದ ಸರ್ಕಾರ
ಮೆರವಣಿಗೆಗೆ ಅನುಮತಿ ಕೊಟ್ಟಿದ್ದು ನೀವು. ಮೆರವಣಿಗೆಗೆ ಭದ್ರತೆ ಕೊಡಬೇಕಾಗಿದ್ದು ನೀವು. ಗಣೇಶನ ಮೆರವಣಿಗೆ ವೇಳೆ ಗಣಪತಿಗೆ ಜೈಕಾರ ಹಾಕಿದ್ದಾರೆ. ಆಗ ಮಸೀದಿ ಬಳಿ ಇನ್ನೊಂದು ಜನಾಂಗ ಅವರ ಘೋಷಣೆ ಕೂಗಿದ್ದಾರೆ. ಆಲ್ಲಿ ಎಷ್ಟು ಜನ ಪೊಲೀಸರನ್ನು ಆಯೋಜಿಸಿದ್ದೀರಿ? ಇದನ್ನು ನೋಡಿದ್ರೆ ಈ ಘಟನೆ ಪೂರ್ವನಿಯೋಜಿತ ಅನ್ನಿಸುತ್ತದೆ. ಘಟನೆಗೂ ಮುನ್ನ ಇಲ್ಲಿದ್ದ ಸಿಆರ್‌ಪಿಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಘಟನೆಯಾದ ಒಂದು ಗಂಟೆಗೆ ಮಾಧ್ಯಮದವರಿಗೆ ಗೊತ್ತಾಗುತ್ತದೆ. ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ. ಇದರ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಮಸೀದಿ ಬಳಿ 10 ನಿಮಿಷ ಡ್ಯಾನ್ಸ್ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡ್ತಾ ಇದ್ದರು. ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಪಿಐ, ಎಎಸ್ಪಿ ಯಾರು ಇರಲಿಲ್ಲ. ಆದರೆ ಎಫ್‌ಐಆರ್‌ನಲ್ಲಿ ಅವರು ಇದ್ದರು ಎಂದು ಇದೆ. ದೂರು ನೀಡಿರುವ ಪಿಇ ರವಿಗೆ ಹೇಗೆ ರಾತ್ರಿ 1.30ರಲ್ಲಿ ಎಫ್‌ಐಆರ್‌ನಲ್ಲಿರುವ ವ್ಯಕ್ತಿಗೆ ಹೆಸರು ಹೇಗೆ ಗೊತ್ತು. ಆತನಿಗೆ ಎಷ್ಟು ನೆನಪಿನ ಶಕ್ತಿ ಇದೆ. ಎಫ್‌ಐಆರ್‌ನಲ್ಲಿ ದೊಡ್ಡ ಗುಂಪು ಗಲಾಟೆ ಮಾಡಿದೆ ಎಂದು ಇದೆ. ಆದರೆ ಗೃಹ ಸಚಿವರು ಏನು ಆಗಿಲ್ಲ ಎನ್ನುತ್ತಾರೆ. ಇದನ್ನೂ ಓದಿ: Manipur | ರಾಕೆಟ್ ದಾಳಿ ಬೆನ್ನಲ್ಲೇ ಮಷೀನ್ ಗನ್ ಬಳಕೆಗೆ ಮುಂದಾದ ಪೊಲೀಸರು – ಕಾಂಗ್ರೆಸ್ ವಿರೋಧ
ಈ ಎಫ್‌ಐಆರ್ ನೋಡಿದರೆ ಪರಮೇಶ್ವರ್‌ನನ್ನು (G Parameshwar) ಗೃಹ ಸಚಿವ ಅನ್ನುವುದಕ್ಕೆ ಆಗುತ್ತಾ ಎಂದು ಟೀಕಿಸಿದರು. ಸ್ಥಳೀಯ ಪೊಲೀಸರ ವೈಫಲ್ಯ ಇಲ್ಲಿ ಎದ್ದು ಕಾಣ್ತಾ ಇದೆ. ಪ್ರತಿಯೊಂದು ರಾಜಕೀಯ ಎಂದು ಕಾಂಗ್ರೆಸ್ ಹೇಳೋದು ಸರಿಯಲ್ಲ. ಅಮಾಯಕ ಜನರ ಬದುಕು ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ಇದು. ನಾನು ಎರಡು ಕೋಮುಗಳ ಬಗ್ಗೆ ಮಾತಾಡಲ್ಲ. ಇದರ ಮಧ್ಯ ಕಂದಕ ತೋಡುವುದನ್ನು ಬಿಡಬೇಕು. ಎಸ್‌ಐಟಿ ತನಿಖೆ ಸರಿಯಲ್ಲ. ಇದು ಸಿದ್ದರಾಮಯ್ಯ, ಶಿವಕುಮಾರ್ ಇನ್ವೇಸ್ಟಿಕೇಶ್ ಟೀಮ್ ಅಂತ ನಾನು ಹೇಳಿದ್ದು. ಅದೇ ರೀತಿಯಾಗಿಯೇ ನಡೆದುಕೊಳ್ಳುತ್ತಿದ್ದಾರೆ. ತಲ್ವಾರ್ ಇಟ್ಟುಕೊಂಡು ಓಡಾಡುತ್ತಾರೆ. ಪೆಟ್ರೋಲ್ ಬಾಂಬ್ ಎಸೆಯುತ್ತಾರೆ ಎಂದರೆ ಎಷ್ಟು ಧೈರ್ಯ ಇರಬೇಕು ಎಂದು ಪ್ರಶ್ನಿಸಿದರು.
ಮಂಡ್ಯದ (Mandya) ನಾಗಮಂಗಲ ಉದ್ವಿಗ್ನ ಹಿನ್ನೆಲೆ ಇಂದು ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿ, ಕಿಡಿಗೇಡಿಗಳ ಕೃತ್ಯದಿಂದ ನಷ್ಟಕ್ಕೆ ಒಳಗಾದವರಿಗೆ ಸಾಂತ್ವನ ನೀಡಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಸಂಗ್ರಹ ಮಾಡಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್‌ಡಿಕೆಗೆ ಮಾಜಿ ಶಾಸಕ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಜೆಡಿಎಸ್ ಮುಖಂಡರು ಸೇರಿದಂತೆ ಇನ್ನಿತರರು ಸಾಥ್ ಕೊಟ್ಟರು. ಇದನ್ನೂ ಓದಿ: ನಾಗಮಂಗಲ ಗಲಭೆ| ಅಂಗಡಿ ಮುಗ್ಗಟ್ಟುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಹೆಚ್‌ಡಿಕೆ