ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ ಐದು ಲಕ್ಷ ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ಒದಗಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಅನೇಕರಿಗೆ ಗಾಯ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗುತ್ತದೆ. ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ನೀಡುವುದರ ಜೊತೆಗೆ ಗಾಯಗಳು ಸಂಪೂರ್ಣ ವೆಚ್ಚ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಬೆಳಗಾವಿಯಲ್ಲಿ ಬಳಿ ಇಂದು ನಡೆದ ಅಪಘಾತದಲ್ಲಿ 7 ಜನ ಮೃತಪಟ್ಟು, ಹಲವರು ಗಾಯಗೊಂಡಿರುವ ವಿಷಯ ತಿಳಿದು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಈ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ನೀಡಲಾಗುವುದು.
— Basavaraj S Bommai (@BSBommai) June 26, 2022
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಏಳು ಜನರು ಸಾವನ್ನಪ್ಪಿದ ಧಾರುಣ ಘಟನೆ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕಲ್ಯಾಳ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ 7 ಜನ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ದಿನಗೂಲಿ ಆಧಾರದ ಮೇಲೆ ಕೆಲಸಕ್ಕೆ ಹೊರಟ್ಟಿದ್ದ ಕಾರ್ಮಿಕರಾಗಿದ್ದಾರೆ. ಸಾಂಬ್ರಾ-ಸುಳೇಭಾವಿ ರೈಲು ಮಾರ್ಗದಲ್ಲಿ ನಡೆಯುತ್ತಿದ್ದ ದುರಸ್ತಿ ಕಾಮಗಾರಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ದೇವರಿಗಾಗಿ ದೇವರಿಂದ್ಲೇ ಹುಡುಕಾಟ- ಹುತ್ತದಲ್ಲಿ ಸಿಕ್ಕೇ ಬಿಡ್ತು 200 ವರ್ಷದ ಹಿಂದಿನ ವಿಗ್ರಹ
Advertisement
Advertisement
ಹಲವರಿಗೆ ಗಂಭೀರ ಗಾಯಗಳಾಗಿದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭೀಕರ ಅಪಘಾತ- 7 ಮಂದಿ ದುರ್ಮರಣ