ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ (Sambra Airport) ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ (Bomb Threat) ಕಳಿಸಿದ್ದಾರೆ.
ಶನಿವಾರ ಏರ್‌ಪೋರ್ಟ್‌ಗೆ ದುಷ್ಕರ್ಮಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಕಳುಹಿಸಿದ್ದು, ಚೆನೈನಿಂದ ಬರುವ ವಿಮಾನದಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದರು. ಬೆಳಗಾವಿಗೆ ಚೆನೈನಿಂದ ಯಾವುದೇ ವಿಮಾನ ಸಂಪರ್ಕ ಇರುವುದಿಲ್ಲ. ಇದರಿಂದ ಇದು ಹುಸಿ ಬೆದರಿಕೆ ಎಂದು ತೀರ್ಮಾನಕ್ಕೆ ಬರಲಾಗಿದೆ.
ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇ-ಮೇಲ್ ಎಲ್ಲಿಂದ ಬಂದಿದೆ? ಯಾರು ಮಾಡಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದೇಶದಲ್ಲಿ ಒಂದು ವಾರದಲ್ಲಿ 46ಕ್ಕೂ ಹೆಚ್ಚು ವಿಮಾನಗಳು ಬೆದರಿಕೆ ಕರೆ ಸ್ವೀಕರಿಸಿರುವ ಬಗ್ಗೆ ವರದಿಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ (Ministry Of Civil Aviation) ತಿಳಿಸಿದೆ.