ಬೆಳಗಾವಿ: ವಿಜಯ ಇನ್ಸ್ ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು ಬಳಿ ಉದ್ವಿಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿಗೆ ಸಂಬಂಧವಿಲ್ಲದ ಯುವಕರು ಬಂದಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಬಿ ಬೋರಲಿಂಗಯ್ಯ ಹೇಳಿದರು.
Advertisement
ನಗರದ ವಿಜಯ ಇನ್ಸ್ ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟುಹಿಡಿದ್ದರು. ಆದರೆ ಕಾಲೇಜಿಗೆ ಸಂಬಂಧ ಇಲ್ಲದವರು ಬಂದು ತಗಾದೆ ತೆಗೆದಿದ್ದಾರೆ. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಇದನ್ನೂ ಓದಿ: ಸ್ಥಳೀಯರಿಗೆ ಖಾಸಗಿ ವಲಯದಲ್ಲಿ ಶೇ.75ರಷ್ಟು ಉದ್ಯೋಗವಕಾಶ – ಸುಪ್ರೀಂನಲ್ಲಿ ಹರ್ಯಾಣಕ್ಕೆ ಜಯ
Advertisement
Advertisement
ಅಲ್ಲಾಹು ಅಕ್ಬರ್ ಘೋಷಣೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಗರದ ಎಲ್ಲಾ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ. ಕಾಲೇಜು ಗೇಟ್ ಬಳಿ ಯಾರೂ ಬರದಂತೆ ಕ್ರಮ ವಹಿಸಲಾಗಿದೆ ಎಂದರು. ಇದನ್ನೂ ಓದಿ: ಎಲ್ಲ ಓಕೆಯಾದ್ರೆ ಗುಡ್‍ನ್ಯೂಸ್ ಕೊಡ್ತೀನಿ ಎಂದ ರಮ್ಯಾ