ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್- ತಾಯಿ ಮಡಿಲು ಸೇರಿದ ಮಕ್ಕಳು

Public TV
1 Min Read
Belagavi Athani police firing on child thieves 2

ಬೆಳಗಾವಿ: ಮಕ್ಕಳ ಕಳ್ಳರ (Child Theft) ಮೇಲೆ ಅಥಣಿ ಪೋಲಿಸರು (Athani Police) ಫೈರಿಂಗ್ (Firing) ಮಾಡಿ ಇಬ್ಬರು ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ.

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದ ಮಹಾರಾಷ್ಟ್ರ ಗಡಿಯಲ್ಲಿ (Maharashtra Border) ಮಕ್ಕಳ ಕಳ್ಳರನ್ನು ತಡೆಗಟ್ಟಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಓರ್ವ ಆರೋಪಿಯ ಎಡಗಾಲಿಗೆ ಗುಂಡೇಟು ಹೊಡೆದು ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ಗಾಯಾಳುವನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಗುರುವಾರ ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ಮಕ್ಕಳನ್ನು ಅಪಹರಿಸಿ ಪರಾರಿಯಾಗಿದ್ದರು. ಇದನ್ನೂ ಓದಿ: ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

Belagavi Athani police firing on child thieves 1

ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಮಕ್ಕಳ ಕಳ್ಳರನ್ನು ಪೊಲೀಸರು ತಡೆಗಟ್ಟಿದಾಗ ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ..

ಪೊಲೀಸರು ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಆರೋಪಿ ಸಂಬಾಜಿ ರಾವಸಾಬ ಕಾಂಬಳೆಯ ಎಡಗಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬೆಳಗಾವಿ ಎಸ್ ಪಿ ಭೀಮಶಂಕರ್ ಗುಳೆದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್‌ ಸಿಬ್ಬಂದಿಯಾದ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಗಾಯಗೊಂಡಿದ್ದು ಅವರನ್ನು ಅಥಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

 

Share This Article