ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ (Maharashtra Karnataka Border Dispute) ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಳ್ಳುತ್ತಿದ್ದು, ತೀವ್ರ ಕುತೂಹಲ ಮೂಡಿದೆ.
ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ ಹಾಗೂ ಗ್ರಾಮಗಳು ಮಹಾರಾಷ್ಟ್ರಕ್ಕೆ (Maharashtra) ಸೇರಬೇಕು ಎಂಬ ಮಹಾರಾಷ್ಟ್ರ ಸರ್ಕಾರದ ಅರ್ಜಿಯನ್ನ ವಿಚಾರಣೆಗೆ ಅಂಗೀಕರಿಸಬೇಕೋ ಅಥವಾ ತಿರಸ್ಕರಿಸಬೇಕೋ ಎಂಬ ಮಹತ್ವದ ನಿರ್ಣಯ ಸುಪ್ರೀಂ ಕೋರ್ಟ್‌ನಿಂದ (Supreme Court) ಹೊರಬೀಳುವ ಸಾಧ್ಯತೆ ಇದೆ. ಇದನ್ನೂ ಓದಿ: ಚಿನ್ನದಂತೆ ಗಲ್ಫ್ ರಾಷ್ಟ್ರಗಳಿಂದ ಡೀಸೆಲ್ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!

ಸುಪ್ರೀಂ ಕೋರ್ಟ್‌ನಲ್ಲಿಂದು ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಅರ್ಜಿ ವಿಚಾರಣೆ ಬರಲಿದೆ. 25 ವರ್ಷಗಳ ಹಿಂದೆ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಇಂದು ಕೋರ್ಟ್ ಆಲಿಸಲಿದೆ. ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರಕ್ಕೆ ಠಕ್ಕರ್ ಕೊಡಲು ಕರ್ನಾಟಕ ಸನ್ನದ್ಧವಾಗಿದ್ದು ಬೆಳಗಾವಿ ಸೇರಿ 865 ನಗರ, ಪಟ್ಟಣ, ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಪರ ವಕಾಲತ್ತನ್ನ ನ್ಯಾಯವಾದಿ ನಿಶಾಂತ ಪಾಟೀಲ ವಹಿಸಲಿದ್ದಾರೆ. ಇದನ್ನೂ ಓದಿ: ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಮೆಸೇಜ್ – ಯುವತಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ ಆರೋಪಿ ಅರೆಸ್ಟ್
ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿ ವಿಚಾರಣೆ ಅಂಗೀಕರಿಸಬೇಕೋ? ಬೇಡವೋ? ಎಂಬ ಬಗ್ಗೆ ಇಂದೇ ನಿರ್ಣಯವಾಗಲಿದ್ದು ಈ ಸಂಬಂಧ ಪ್ರಬಲ ವಾದ ಮಂಡಿಸಲು ಕರ್ನಾಟಕದ ಕಾನೂನು ತಂಡವೂ ಸನ್ನದ್ಧವಾಗಿದೆ. ಮಹಾರಾಷ್ಟ್ರ ಸರ್ಕಾರ ಗಡಿ ವಿವಾದ ಸಂಬಂಧ ಸಲ್ಲಿಸಿರುವ ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡುವ ಸಾಧ್ಯತೆಯೂ ದಟ್ಟವಾಗಿದೆ. ಬೆಳಗಾವಿ ಮೇಲೆ ಕಣ್ಣಿಟ್ಟಿರುವ ಮಹಾರಾಷ್ಟ್ರಕ್ಕೆ ಖಡಕ್ ಎಚ್ಚರಿಕೆಯನ್ನೂ ಕೊಟ್ಟ ಸಿಎಂ ಸಿದ್ದರಾಮಯ್ಯ ಕೊಟ್ಟಿದ್ದಾರೆ. ಗಡಿ ರೇಖೆ ಗುರುತಿಸುವ ಪರಮಾಧಿಕಾರ ಇರೋದು ಸಂಸತ್ತಿಗೆ ಮಾತ್ರ. ಗಡಿ ರೇಖೆ ಗುರುತಿಸುವುದು ಸುಪ್ರೀಂ ಕೋರ್ಟ್ ವ್ಯಾಪ್ತಿಗೆ ಬರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಿಂತು ಮಹಾರಾಷ್ಟ್ರ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಸಿಎಂ, ಕರ್ನಾಟಕದ ಕಾನೂನು ತಜ್ಞರ ತಂಡ ಬಲಾಢ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಗಡಿ ವಿವಾದ ಸಂಬಂಧ ಕೇಸ್ ಹಾಕಲು ಮಹಾರಾಷ್ಟ್ರ ಸರ್ಕಾರಕ್ಕೆ ಬರಲ್ಲ ಈ ವಿವಾದ ನ್ಯಾಯಾಂಗ ವ್ಯಾಪ್ತಿಗೆ ಬರಲ್ಲ ಎಂಬುದು ನಮ್ಮ ವಾದ ಎಂದು ಸಿಎಂ ಹೇಳಿದ್ದಾರೆ.
ಗಡಿ ವಿವಾದ ಅರ್ಜಿ ವಿಚಾರಣೆಗೆ ಮಹೂರ್ತ ಫಿಕ್ಸ್ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರೂ ಅಲರ್ಟ್ ಆಗಿದ್ದಾರೆ. ಮರಾಠಿ ಭಾಷಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆಗೆ ನಿರ್ಧಾರ ಮಾಡಿದ್ದಾರೆ. ಗಡಿ ಭಾಗಗಳಲ್ಲೂ ಪೊಲೀಸರ ನಿಯೋಜನೆಗೆ ಮುಂದಾಗಿರುವ ನಗರ, ಜಿಲ್ಲಾ ಪೊಲೀಸರು ಸಧ್ಯ ಸುಪ್ರೀಂ ಕೋರ್ಟ್ ತೀರ್ಪಿನತ್ತ ಕರ್ನಾಟಕ ಹಾಗೂ ಮಹಾರಾಷ್ಟ್ರದ ಚಿತ್ತ ನೆಟ್ಟಿದೆ.

