Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಕರ್ತವ್ಯಕ್ಕೆ ಹಾಜರಾಗದವರ ನೇಮಕಾತಿ ರದ್ದು: ಸಿಎಂ

Public TV
Last updated: August 21, 2021 7:54 pm
Public TV
Share
5 Min Read
BOMMAI 5
SHARE

ಬೆಳಗಾವಿ: ಹೊಸದಾಗಿ ನೇಮಕಗೊಂಡು ಇದುವರೆಗೆ ಕರ್ತವ್ಯಕ್ಕೆ ಹಾಜರಾಗದ ವೈದ್ಯರಿಗೆ ಕೂಡಲೇ ನೋಟಿಸ್ ನೀಡಬೇಕು. ಆದಾಗ್ಯೂ ಹಾಜರಾಗದಿದ್ದರೆ ಅವರ ನೇಮಕಾತಿಯನ್ನು ರದ್ದುಪಡಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇರುವ ಕಡೆಯ ಸಿಬ್ಬಂದಿ ಹಾಗೂ ವೈದ್ಯರ ನಿಯೋಜನೆಯನ್ನು ರದ್ದುಗೊಳಿಸಬೇಕು. ಕೆಲಸದ ಒತ್ತಡ ಆಧರಿಸಿ ತಾತ್ಕಾಲಿಕವಾಗಿ ಅಗತ್ಯವಿರುವ ಕಡೆಗಳಲ್ಲಿ ಮಾತ್ರ ನಿಯೋಜಿಸಬೇಕು. ಡಯಾಲಿಸಿಸ್ ಚಿಕಿತ್ಸೆಗೆ ದೊರಕದಿರುವ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು.

CORONA VIRUS 3 medium

ಕೋವಿಡ್ ಪರೀಕ್ಷೆ ಹೆಚ್ಚಿಸಲು ನಿರ್ದೇಶನ:
ಗಡಿ ಜಿಲ್ಲೆಯಾಗಿರುವುದರಿಂದ ತೀವ್ರ ನಿಗಾವಹಿಸಬೇಕು ಎಲ್ಲಿ ಸೋಂಕು ಕಂಡುಬರುತ್ತದೆಯೋ ಅಂತಹ ಪ್ರದೇಶಗಳಲ್ಲಿ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ಗಡಿಭಾಗದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಬೇಕು. ರೈಲು ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಆರಂಭಿಸಬೇಕು. ಮುಂದಿನ ಹತ್ತರಿಂದ ಹದಿನೈದು ದಿನಗಳಲ್ಲಿ ಆಕ್ಸಿಜನ್ ಘಟಕಗಳು ಕಾರ್ಯಾರಂಭಿಸಬೇಕು. ಪ್ರತಿದಿನ ಐದು ಲಕ್ಷ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಒಂದು ಕೋಟಿ ಲಸಿಕೆಗಳನ್ನು ಪೂರೈಸಲು ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಲಸಿಕೆ ಬಳಕೆಯನ್ನು ಆಧರಿಸಿ ಲಸಿಕೆ ಪೂರೈಕೆ ಮಾಡುವುದರಿಂದ ಪ್ರತಿ ಜಿಲ್ಲೆಯಲ್ಲಿ ಸಾಮಥ್ರ್ಯಕ್ಕೆ ಅನುಗುಣವಾಗಿ ಗರಿಷ್ಠ ಲಸಿಕೆ ನೀಡಲು ಕ್ರಮ ತೆಗೆದುಕೊಳ್ಳಬೇಕು. ದೈನಂದಿನ ಲಸಿಕಾ ಪ್ರಮಾಣ ಆಧರಿಸಿ ಲಸಿಕೆಯನ್ನು ಪೂರೈಸಲಾಗುವುದು. ಆದ್ದರಿಂದ ಲಸಿಕೆ ಪೂರೈಕೆಯಾದ ತಕ್ಷಣವೇ ಅವುಗಳನ್ನು ಜನರಿಗೆ ನೀಡಬೇಕು ಎಂದು ಹೇಳಿದರು.

corona virus medium

ಮೂರನೇ ಅಲೆ ನಿರ್ವಹಣೆಗೆ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಶಾಲೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಬೇಕು. ಅಪೌಷ್ಠಿಕತೆಯಿಂದ ಬಳಲುವ ಮಕ್ಕಳನ್ನು ಗುರುತಿಸಿ ಪೌಷ್ಠಿಕಾಹಾರ ಒದಗಿಸಬೇಕು. ಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ತಕ್ಷಣವೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು. ಕೋವಿಡ್ ಅಥವಾ ಅಪೌಷ್ಠಿಕತೆಯಿಂದ ಯಾವುದೇ ಮಗುವಿಗೆ ತೊಂದರೆಯಾಗುವುದನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗೆ ಬಾಕಿ ವೇತನ ಪಾವತಿಗೆ ಅಗತ್ಯ ಅನುದಾನ ನೀಡಲಾಗುವುದು. ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿರುವುದರಿಂದ ಹೊಸ ತಾಲೂಕುಗಳ ಆಧಾರದ ಮೇರೆಗೆ ಆಸ್ಪತ್ರೆ ಸ್ಥಾಪನೆ ಸೇರಿದಂತೆ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ವಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಇದನ್ನೂ ಓದಿ: ನೆರೆಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಲು ಸಿಎಂ ಸೂಚನೆ

govind karajola medium

ಇದೇ ವೇಳೆ ಜಲಸಂಪನ್ಮೂಲ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಮಾತನಾಡಿ, ಇತ್ತೀಚಿನ ನೆರೆಹಾನಿಯಿಂದ ಪ್ರಾಥಮಿಕ ಮಾಹಿತಿ ಪ್ರಕಾರ 2800 ಕೋಟಿ ರೂಪಾಯಿ ಹಾನಿ ವರದಿಯಾಗಿದೆ. ಪ್ರವಾಹ ಸಂದರ್ಭದಲ್ಲಿ ಮನೆಗಳು ಹಾನಿಯಾದಾಗ ಕೂಡಲೇ ಸಮೀಕ್ಷೆ ಕೈಗೊಂಡು ಆಯಾ ಪಂಚಾಯ್ತಿಯಲ್ಲಿ ಪಟ್ಟಿಯನ್ನು ಪ್ರದರ್ಶಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕು. ಇದರಿಂದ ಗೊಂದಲ ನಿವಾರಣೆ ಜತೆಗೆ ಅನಧಿಕೃತ ವ್ಯಕ್ತಿಗಳು ಪರಿಹಾರ ಪಡೆದುಕೊಳ್ಳುವುದನ್ನು ತಪ್ಪಿಸಬಹುದು. ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಹಾಗೂ ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ ಅವರು, ನೆರೆಹಾನಿ ಸಮೀಕ್ಷೆ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಹಲವಾರು ವಿಷಯಗಳನ್ನು ಸಭೆಯಲ್ಲಿ ಚರ್ಚಿಸಿದರು.

ಶಾಸಕಿ ಅಂಜಲಿ ನಿಂಬಾಳ್ಕರ್ ಮಾತನಾಡಿ, ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯಕೀಯ ಸಿಬ್ಬಂದಿಗೆ ಸಂಬಳ ಬಿಡುಗಡೆಯ ಕುರಿತು ಮುಖ್ಯಮಂತ್ರಿಗಳ ಗಮನಸೆಳೆದರು. ಶಾಶ್ವತ ಸ್ಥಳಾಂತರವಾಗಲು ಬಯಸುವ ಕುಟುಂಬಗಳಿಗೆ ಸರಕಾರಿ ಜಮೀನಿನಲ್ಲಿ ಪುನರ್ವಸತಿ ಕಲ್ಪಿಸಬೇಕು. ಶಾಸಕ ಮಹಾಂತೇಶ ಯಾದವಾಡ ಅವರು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಕಂಡುಬಂದಿದೆ. ಆದ್ದರಿಂದ ಔಷಧಿ ಪೂರೈಸಲು ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡರು. ಇದನ್ನೂ ಓದಿ: ಇನ್ನು ಹತ್ತು ದಿನಗಳ ಕಾಲ ರಾಜಕೀಯದಿಂದ ಸಿದ್ದರಾಮಯ್ಯ ದೂರ

GANESH HUKKERI

ಶಾಸಕ ಗಣೇಶ್ ಹುಕ್ಕೇರಿ ಮಾತನಾಡಿ, ಬೆಳಗಾವಿ ಗಡಿ ಜಿಲ್ಲೆಯಾಗಿರುವುದರಿಂದ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿಕೊಂಡರು. ಶಾಸಕರಾದ ಸತೀಶ್ ಜಾರಕಿಹೊಳಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಡಿಮೆಯಾಗಿದೆ ಎಂದು ಪರೀಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸದಂತೆ ತಿಳಿಸಿದರು. ಶಾಸಕ ಮಹಾಂತೇಶ ಕೌಜಲಗಿ, ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂದಿ ನಿಯೋಜಿಸುವಂತೆ ಮನವಿ ಮಾಡಿಕೊಂಡರು. ಡಯಾಲಿಸಿಸ್ ಚಿಕಿತ್ಸೆಗೆ ಸಂಬಂಧಿಸಿದಂತೆ ತಾಲೂಕು ಆಸ್ಪತ್ರೆಗಳಲ್ಲಿ ತೊಂದರೆಯಾಗುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಲಸಿಕೆ ಪೂರೈಕೆ ಸಮರ್ಪಕವಾಗಿ ಪೂರೈಸದಿರುವುದರಿಂದ ಲಸಿಕಾಕರಣ ಅಭಿಯಾನ ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ ಹೆಚ್ಚಿನ ಲಸಿಕೆ ಪೂರೈಸಬೇಕು ಎಂದರು. ಹೆಚ್ಚುವರಿ ಲಸಿಕೆ ಪೂರೈಸಬೇಕು ಎಂದು ಸಂಸದೆ ಮಂಗಲಾ ಅಂಗಡಿ ಕೂಡ ಒತ್ತಾಯಿಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಕೋವಿಡ್ ತಪಾಸಣೆಗೆ ಅಗತ್ಯವಿರುವ ಆರ್.ಟಿ.-ಪಿಸಿಆರ್ ಪರೀಕ್ಷಾ ಕೇಂದ್ರವನ್ನು ಗೋಕಾಕ್‍ನಲ್ಲಿ ಕೂಡ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಶ್ರೀಮಂತ ಪಾಟೀಲ ಮಾತನಾಡಿ, ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಾದರೆ ಆಕ್ಸಿಜನ್ ತಕ್ಷಣವೇ ಪೂರೈಸಲು ಅನುಕೂಲವಾಗುವಂತೆ ಬಾಟ್ಲಿಂಗ್ ಯುನಿಟ್ ಸ್ಥಾಪಿಸಲು ಕೋರಿದರು. ಶಾಸಕ ಮಹೇಶ್ ಕುಮಠಳ್ಳಿ, ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಹೆಚ್ಚಾದರೆ ಗಡಿಯಲ್ಲಿರುವ ಅಥಣಿ ತಾಲೂಕಿನ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆದ್ದರಿಂದ ತುರ್ತು ಚಿಕಿತ್ಸೆಗೆ ಅನೂಕೂಲ ಕಲ್ಪಿಸಬೇಕು ಹಾಗೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಸಂಪೂರ್ಣ ಜಲಾವೃತವಾಗುವ ಗ್ರಾಮಗಳ ಎಲ್ಲ ಕುಟುಂಬಗಳಿಗೆ ತಲಾ ಹತ್ತು ಸಾವಿರ ಪರಿಹಾರ ನೀಡಬೇಕು ಎಂದು ಕೋರಿದರು.  ಇದನ್ನೂ ಓದಿ: ಹಬ್ಬಕ್ಕೆ ಮಾಡಿ ಗೋಧಿ ಹಿಟ್ಟಿನ ಲಡ್ಡು

Srimanth Patil

ಶಾಸಕ ಅನಿಲ್ ಬೆನಕೆ ಹಾಗೂ ಶಾಸಕ ದುರ್ಯೋಧನ ಐಹೊಳೆ ಅವರು, ಲಸಿಕೆ ಪೂರೈಕೆ ಹೆಚ್ಚಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಕೋವಿಡ್ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲೆಯಲ್ಲಿ ಸದ್ಯಕ್ಕೆ 468 ಸಕ್ರಿಯ ಪ್ರಕರಣಗಳಿವೆ. ಕಳೆದ 0.81 ಪಾಸಿಟಿವಿಟಿ ದರ ಮರಣ ದರ ಶೇ. 2.08 ರಷ್ಟಿದೆ ಎಂದು ತಿಳಿಸಿದರು.

ಎರಡನೇ ಡೋಸ್ ಶೇ.13 ರಷ್ಟು ನೀಡಲಾಗಿದೆ. ಗಡಿಭಾಗದ 94 ಗ್ರಾಮದಲ್ಲಿ ಲಸಿಕಾಕರಣ ಹಮ್ಮಿಕೊಂಡು ಎರಡೂ ಲಕ್ಷಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಅದೇ ರೀತಿ ಕೋವಿಡ್ ನಿರ್ವಹಣೆಗಾಗಿ ಜಿಲ್ಲೆಗೆ 34 ಕೋಟಿ ಬಿಡುಗಡೆ 28 ಕೋಟಿ ಖರ್ಚು ಮಾಡಲಾಗಿದೆ. ಆಗಸ್ಟ್ 16 ರಿಂದ ವಾತ್ಸಲ್ಯ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. 221 ತಂಡಗಳನ್ನು ರಚಿಸಿ 1372 ಶಿಬಿರಗಳನ್ನು ಆಯೋಜಿಸಲಾಗಿದೆ. ಶಾಲಾ ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಶೇ.98 ರಷ್ಟು ಶಿಕ್ಷಕರಿಗೆ ಕೋವಿಡ್ ಲಸಿಕೆ ನೀಡಲಾಗಿರುತ್ತದೆ. ಆಕ್ಸಿಜನ್ ಕೊರತೆ ನೀಗಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇತ್ತೀಚಿಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಸಮೀಕ್ಷೆ ನಡೆಸಲಾಗುತ್ತಿದ್ದು, ಸಮೀಕ್ಷೆ ಬಳಿಕ ಹಾನಿಯ ನಿಖರ ಮಾಹಿತಿ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಸಭೆಯಲ್ಲಿ ತಿಳಿಸಿದರು.

corona virus 1 medium

ಚಿಕ್ಕೋಡಿ ಕೋವಿಡ್ ಪರೀಕ್ಷಾ ಲ್ಯಾಬ್ ಉದ್ಘಾಟನೆ:
ಕೋವಿಡ್ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವುದರ ಜತೆಗೆ ತ್ವರಿತವಾಗಿ ತಪಾಸಣಾ ವರದಿ ನೀಡಲು ಅನುಕೂಲವಾಗುವಂತೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ನೂತನ ಕೋವಿಡ್ ಆರ್.ಟಿ.ಪಿ.ಸಿ.ಆರ್. ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನ್ ಲೈನ್ ಮೂಲಕ ಉದ್ಘಾಟಿಸಿದರು.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ್ ಕತ್ತಿ ಸಭೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

TAGGED:Basavaraj BommaibelagaviCorona VirusCovid 19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಸವರಾಜ್ ಬೊಮ್ಮಾಯಿಬೆಳಗಾವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhruva Sarja 2
3.15 ಕೋಟಿ ವಂಚನೆ ಆರೋಪ; ನಟ ಧೃವ ಸರ್ಜಾ ವಿರುದ್ಧ ಎಫ್‌ಐಆರ್
Cinema Crime Latest Sandalwood Top Stories
Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories

You Might Also Like

Bagalkote Ragging Suicide
Bagalkot

ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
36 minutes ago
HR Ranganath Public TV Vidhya Mandira
Bengaluru City

ಜಾಗತಿಕ ಮಟ್ಟದಲ್ಲಿ ಬೆಳೆಯಬೇಕಾದ್ರೆ ಉನ್ನತ ಶಿಕ್ಷಣ ವ್ಯವಸ್ಥೆ ಅಪ್‌ಗ್ರೇಡ್ ಆಗ್ಬೇಕು: ಹೆಚ್‌ಆರ್ ರಂಗನಾಥ್

Public TV
By Public TV
41 minutes ago
Gadag IPS Officer Brother
Crime

ಗದಗ | ಪೊಲೀಸ್‌ ಅಧಿಕಾರಿಯ ಸಹೋದರನ ದರ್ಪ – ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ರಂಪಾಟ

Public TV
By Public TV
52 minutes ago
public tv vidhya mandir
Bengaluru City

ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

Public TV
By Public TV
56 minutes ago
Mantralaya Aradhana Mahotsava
Districts

ಮಂತ್ರಾಲಯದಲ್ಲಿ ರಾಯರ ಆರಾಧನಾ ಸಂಭ್ರಮ – ಮೂಲ ವೃಂದಾವನಕ್ಕೆ ಶ್ರೀನಿವಾಸ ದೇವರ ಶೇಷವಸ್ತ್ರ ಸಮರ್ಪಣೆ

Public TV
By Public TV
2 hours ago
New Delhi Rain
Latest

ದೆಹಲಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ, 100ಕ್ಕೂ ಹೆಚ್ಚು ವಿಮಾನಗಳು ವಿಳಂಬ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?