Connect with us

ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ ಇನ್ನೂ 1 ವಾರ ಲಾಕ್‍ಡೌನ್ ಅನಿವಾರ್ಯ: ಜೊಲ್ಲೆ

ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ ಇನ್ನೂ 1 ವಾರ ಲಾಕ್‍ಡೌನ್ ಅನಿವಾರ್ಯ: ಜೊಲ್ಲೆ

ಚಿಕ್ಕೋಡಿ(ಬೆಳಗಾವಿ): ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡಲೇಬೇಕು ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದ್ದಾರೆ.

ಇಂದು ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಅವರು ಭೇಟಿ ನೀಡಿದರು. ಬಳಿಕ ಮಾತನಾಡಿದ ಸಂಸದರು, ಕೊರೊನಾ ನಿಯಂತ್ರಣಕ್ಕಾಗಿ ಜಾರಿ ಮಾಡಿರುವ ಲಾಕ್ ಡೌನ್ ಅನ್ನು ಇಷ್ಟು ದಿನ ತಡೆದಿದ್ದಿವೆ, ಇನ್ನೂ ಸ್ವಲ್ಪ ದಿನ ತಡೆಯಲು ಸಮಸ್ಯೆ ಇಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಿ ಹರಡುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬಂದರೇ ಲಾಕ್ ಡೌನ್ ಸಡಿಲಿಸಲು ಅಭ್ಯಂತರವಿಲ್ಲ ಎಂದು ಲಾಕ್ ಡೌನ ಮುಂದುವರಿಸುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.

ಈ ವೇಳೆ ಸಚಿವ ಉಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹುಕ್ಕೇರಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಆಹಾರ ಕಿಟ್ ವಿತರಿಸಿದರು. ಸಚಿವ ಉಮೇಶ್ ಕತ್ತಿ, ಉಪ ವಿಭಾಗದಿಕಾರಿ ರವಿಂದ್ರ ಕರಲಿಂಗಣ್ಣವರ, ಹುಕ್ಕೇರಿ ತಹಶೀಲ್ದಾರ್ ಡಾ.ಡಿ.ಹೆಚ್ ಹೂಗಾರ, ತಾಲೂಕು ವೈದ್ಯಾಧಿಕಾರಿ ಡಾ.ಉದಯ ಕುಡಚಿ ಉಪಸ್ಥಿತರಿದ್ದರು.