– ನನ್ ಮೂಡ್ ಹಾಳ್ ಮಾಡಬ್ಯಾಡ್ರಿ
ಚಿಕ್ಕೋಡಿ(ಬೆಳಗಾವಿ): ಸರ್ಕಾರ ರಚನೆಗೆ ಕಾರಣರಾದವರನ್ನೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಿಂದಿಸಿದ ಘಟನೆಯೊಂದು ನಡೆದಿದೆ.
ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ ಅಥಣಿ ಮತ ಕ್ಷೇತ್ರದ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಕುರಿತು ಅಪನಿಂದನೆ ಮಾಡಿದ್ದಾರೆ. ಸವದಿ ತಮ್ಮ ಬೆಂಬಲಿಗನ ಜೊತೆ ಮೊಬೈಲ್ ಮಾತನಾಡುತ್ತಾ ಕುಮುಟಳ್ಳಿ ವಿರುದ್ಧ ಆಕ್ಷೇಪಾರ್ಹ ಮಾತಾಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸವದಿ ಹೇಳಿದ್ದೇನು?
ಪ್ರವಾಹ ಪೀಡಿತ ಗ್ರಾಮಗಳಿಗೆ ಸಂತ್ರಸ್ತರ ಅಳಲು ಕೇಳಲು ಹೋಗುತ್ತಿದ್ದಾಗ ಮೊಬೈಲ್‍ನಲ್ಲಿ ಮಾತನಾಡುತ್ತಾ ಮುಂಜಾನೆ ಕುಮಟಳ್ಳಿ ಅಂತಹ ದರಿದ್ರ ಮಕ್ಕಳ ಹೆಸರು ನೆನಪಿಸಬೆಡಿ. ಅವನ ಸುದ್ದಿ ತಗೊಂಡ್ ನಾನೇನು ಮಾಡಲಿ. ನನ್ನ ಮೂಡ್ ಹಾಳು ಮಾಡಬೇಡಿ ಎಂದಿದ್ದಾರೆ.
ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿ ಬಿಜೆಪಿ ಸರ್ಕಾರದ ಆಸ್ತಿತ್ವಕ್ಕೆ ಮಹೇಶ್ ಕುಮುಟಳ್ಳಿ ಬಲ ತುಂಬಿದ್ದರು. ಆದರೆ ಇದೀಗ ಅವರ ವಿರುದ್ಧವೇ ಡಿಸಿಎಂ ಗರಂ ಆಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.