ಚಿಕ್ಕೋಡಿ(ಬೆಳಗಾವಿ): ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳನ್ನ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಜರುಗಿದೆ.
Advertisement
ಹುಕ್ಕೇರಿ ಮತಕ್ಷೇತ್ರದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗಿಯಾಗಿದ್ದ ಸಚಿವರು, ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಜಲಜೀವನ ಮಿಶನ್ ಕಾಮಗಾರಿ ಕಳಪೆಯಾದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬಾರಜು ಇಲಾಖೆಯ ಅಭಿಯಂತರಾದ ವಿಜಯ ಮಿಶ್ರಕೋಟಿ ಹಾಗೂ ಬಿ.ಡಿ. ನಾಯಿಕವಾಡಿ ಅವರನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: 2023 ರಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತೆ, ಇದು ದೈವದ ಆಟ: ಶರವಣ
Advertisement
Advertisement
ಗ್ರಾಮೀಣ ಪ್ರದೇಶದ ಮನೆಗಳಿಗೆ ನಿರಂತರ ನೀರು ಪೂರೈಕೆ ಯೋಜನೆಯ ಬಗ್ಗೆ ಕ್ಷೇತ್ರದ ಜನರು ದೂರು ನೀಡುತ್ತಿದ್ದಾರೆ. ನಿಮಗೆ ನಾಚಿಕೆಯಾಗಲ್ವಾ? ಕಮಿಷನ್ ಹಣ ತಿನ್ನೋದೇ ನಿಮ್ಮ ಕಾಯಕವಾಗಿದೆ. ಕೆಲಸ ಮಾಡಿ ಇಲ್ಲವಾದಲ್ಲಿ ಮನೆಗೆ ಹೋಗಿ. ನಿಮ್ಮ ಬಗ್ಗೆ ಇಲಾಖೆಗೆ ದೂರು ನೀಡಿ ಅಮಾನತು ಮಾಡಿಸಿ ಮನೆಗೆ ಕಳಿಸುತ್ತೇನೆ ಸಚಿವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ, ಯಡಿಯೂರಪ್ಪ ಕಾಂಗ್ರೆಸ್‍ನಿಂದ ಸಿಎಂ ಆದೆ ಅಂತ ಹೇಳಬೇಕು: ಎ.ಮಂಜು
Advertisement
ಸಭೆಯಲ್ಲಿ ಹುಕ್ಕೇರಿ ತಹಶೀಲ್ದಾರ್ ಡಿ.ಎಚ್.ಹೂಗಾರ, ತಾಲೂಕಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗ್ತಿರೋದು ನೀವೇ ಸಿದ್ದರಾಮಯ್ಯ ಅಲ್ಲ – ಹೆಚ್‍ಡಿಕೆ ವಿರುದ್ಧ ಜಮೀರ್ ಗುಡುಗು