Belgaum

ವಿಧಾನಪರಿಷತ್ ಚುನಾವಣೆ ಸ್ಪರ್ಧೆಗೆ ಸಿದ್ಧ: ಪ್ರಕಾಶ್ ಹುಕ್ಕೇರಿ

Published

on

Share this

ಚಿಕ್ಕೋಡಿ(ಬೆಳಗಾವಿ): ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ತಿಳಿಸಿದರು.

ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಕಳೆದ 35 ವರ್ಷಗಳಿಂದ ಜನಪ್ರತಿನಿಧಿಯಾಗಿ ಜನರ ಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕನು ಕೂಡ ಆಗಿದ್ದೇನೆ.

1988ರಲ್ಲಿ ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರಾದಂತಹ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಸತೀಶ್ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನು ನೀಡಬೇಕು ಹಾಗೂ ಪ್ರಕಾಶ್ ಹುಕ್ಕೇರಿ ಅವರು ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಬೇಕೆಂದು ಜನರು ನನ್ನ ಬಳಿ ಕೇಳಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಟ್ರೆಂಡಿಂಗ್ ಆಯ್ತು ಬೆಂಗಳೂರು ಹೋಟೆಲಿನ ಐಸ್ ಕ್ಯಾಂಡಿ ಇಡ್ಲಿ

ಈ ನಿಟ್ಟಿನಲ್ಲಿ ಮುಂಬರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸ್ಪರ್ಧಿಸಲು ಸಿದ್ಧನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನನಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನು ನೀಡಬೇಕೆಂದು ಮಾಜಿ ಸಂಸದ ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement